Karnataka Weather : ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿದೆ.

ರಾಜ್ಯದ ಅನೇಕ ಭಾಗಗಳಲ್ಲಿ ಬುಧವಾರ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಅಕ್ಟೋಬರ್ 23) ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 26°C, ಕನಿಷ್ಠ 21°C ಇರುವ ನಿರೀಕ್ಷೆ.
ಇದನ್ನು ಓದಿ : ಸ್ಪರ್ಧಿಗಳಿಗೆ ಸೂಪರ್ ಹೀರೋ ಆದ ಸೂರಜ್ ಸಿಂಗ್!

Karnataka Weather : ಎಲ್ಲೆಲ್ಲಿ ಮಳೆಯಾಗಲಿದೆ?
- ಅತಿ ಭಾರಿ ಮಳೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು
- ಭಾರಿ ಮಳೆ ಸಾಧ್ಯತೆ: ಶಿವಮೊಗ್ಗ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ
- ಹಗುರದಿಂದ ಸಾಧಾರಣ ಮಳೆ: ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ
- ಉಳಿದ ಜಿಲ್ಲೆಗಳಲ್ಲಿ: ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಮೀನುಗಾರರಿಗೆ ಎಚ್ಚರಿಕೆ
ಅಕ್ಟೋಬರ್ 25 ರವರೆಗೆ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 35–55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು ಎಂದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಜನರು ಅನಾವಶ್ಯಕ ಪ್ರಯಾಣದಿಂದ ದೂರವಿದ್ದು, ಹವಾಮಾನ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.

ಇದನ್ನು ನೋಡಿ : ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ




