Karnataka Politics : ನವೆಂಬರ್ನ ಕ್ರಾಂತಿ ಚರ್ಚೆಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್ನೊಳಗೆ ಹೊಸ ಚರ್ಚೆಗೆ ಕಾರಣವಾಗಿದೆ.

Karnataka Politics : ಎಂಎಲ್ಸಿ ಯತೀಂದ್ರ ಸ್ಪಷ್ಟನೆ – “ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ”
ನವೆಂಬರ್ನ ಕ್ರಾಂತಿ ಚರ್ಚೆಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್ನೊಳಗೆ ಹೊಸ ಚರ್ಚೆಗೆ ಕಾರಣವಾಗಿದೆ.
ಆದರೆ, ಯತೀಂದ್ರ ರಾಜಕೀಯ ಉತ್ತರಾಧಿಕಾರಿ ಕುರಿತ ಹೇಳಿಕೆ ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
“ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ” – ಯತೀಂದ್ರ
ಮಾಧ್ಯಮದವರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, “ನಾನು ಯಾವುದೇ ರಾಜಕೀಯ ಉತ್ತರಾಧಿಕಾರಿ ಕುರಿತು ಹೇಳಿಲ್ಲ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತವನ್ನು ಸಚಿವ ಸತೀಶ್ ಜಾರಕಿಹೊಳಿ ಅವರೂ ಪಾಲಿಸುತ್ತಿದ್ದಾರೆ. ಸೈದ್ಧಾಂತಿಕ ರಾಜಕಾರಣ ಮಾಡುವವರನ್ನು ಪ್ರೋತ್ಸಾಹಿಸಬೇಕೆಂಬ ಉದ್ದೇಶದಿಂದ ಮಾತನಾಡಿದ್ದೆ” ಎಂದು ಸ್ಪಷ್ಟನೆ ನೀಡಿದರು.
MUST READ : Bengaluru Love Sex Dhokha : ಆಂಧ್ರ ಮೂಲದ ಯುವತಿಗೆ ಲವ್ ಸೆಕ್ಸ್ ದೋಖಾ?

2028ರ ಚುನಾವಣೆಯಲ್ಲಿ ತಂದೆ ಸ್ಪರ್ಧಿಸುವುದಿಲ್ಲ – ಯತೀಂದ್ರ
ಯತೀಂದ್ರ ಅವರು ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. “ಆ ಬಳಿಕ ಜಾತ್ಯತೀತ ಸಿದ್ಧಾಂತ ಇಟ್ಟುಕೊಂಡ ಹಲವಾರು ನಾಯಕರಿದ್ದಾರೆ. ಅವರಲ್ಲಿ ಸತೀಶ್ ಜಾರಕಿಹೊಳಿ ಮುನ್ನಡೆ ವಹಿಸಲಿ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದರು.
ನವೆಂಬರ್ ಕ್ರಾಂತಿ ಕೇವಲ ಊಹಾಪೋಹ
ನವೆಂಬರ್ ಕ್ರಾಂತಿ ಎಂಬುದು ಕೇವಲ ಊಹಾಪೋಹ. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.
ಸಿಎಂ ಸ್ಥಾನಕ್ಕೆ ಅರ್ಹತೆ ಇರುವ ನಾಯಕರಿದ್ದಾರೆ, ಆದರೆ ಹೈಕಮಾಂಡ್ ಮತ್ತು ಶಾಸಕರು ತೀರ್ಮಾನ ಮಾಡುತ್ತಾರೆ. ತಂದೆ ನಿವೃತ್ತಿಯಾದ ಬಳಿಕ ಆ ಸ್ಥಾನ ತುಂಬುವ ಶಕ್ತಿ ಸತೀಶ್ ಜಾರಕಿಹೊಳಿಗಿದೆ” ಎಂದು ಯತೀಂದ್ರ ಸ್ಪಷ್ಟಪಡಿಸಿದರು.
ಕನಕದಾಸರ ಮೂರ್ತಿ ಲೋಕಾರ್ಪಣೆ ಸಂದರ್ಭದ ಭಾಷಣ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ, “ತಂದೆಯವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ.
ಮುಂದಿನ ಪೀಳಿಗೆಗೆ ವೈಚಾರಿಕವಾಗಿ ಪ್ರಗತಿಪರ ನಾಯಕತ್ವ ಬೇಕು. ಸತೀಶ್ ಜಾರಕಿಹೊಳಿ ಅಂತಹ ನಾಯಕತ್ವ ವಹಿಸಬಲ್ಲರು” ಎಂದು ಹೇಳಿದರು.
ಇದನ್ನು ನೋಡಿ : ಕೆರೆಗೆ ಬಿದ್ದು ತಂದೆ–ಮಗಳು ಸೇರಿ ಮೂವರು ಸಾವು




