RECRUITMENT 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

RECRUITMENT 2025: ರಾಜ್ಯದಲ್ಲಿ ಭರ್ಜರಿ ಪೊಲೀಸ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅಧಿಸೂಚನೆ ಹೊರಬೀಳಲಿದೆ.
ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾಹಿತಿ ನೀಡಿದ್ದು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನೇಮಕಾತಿ ಸಂಬಂಧಿತ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:Bengaluru : ಲಾಲ್ಬಾಗ್ ಸುರಂಗ ರಸ್ತೆ ಯೋಜನೆಗೆ ತೇಜಸ್ವಿ ಸೂರ್ಯ ವಿರೋಧ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳ ಹಿನ್ನೆಲೆಯಲ್ಲಿ ಈ ಬಾರಿ ದೊಡ್ಡ ಮಟ್ಟದ ನೇಮಕಾತಿ ನಡೆಯಲಿದೆ. ಹೊಸ ನೇಮಕಾತಿಯಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ಬಲ ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಅಧಿಸೂಚನೆ ಹೊರಬಿದ್ದ ನಂತರ ಅರ್ಜಿ ಪ್ರಕ್ರಿಯೆ, ಅರ್ಹತೆ, ಪರೀಕ್ಷಾ ದಿನಾಂಕ ಮತ್ತು ಇತರ ವಿವರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
MUST WATCH: ತುಮಕೂರು ಜನರಿಗೆ GOOD NEWS ಇನ್ಮುಂದೆ CANCER ಕಾಯಿಲೆಗೆ ಸಿಗಲಿದೆ ಹೈಟೆಕ್ ಚಿಕಿತ್ಸೆ…!?




