BENGALURU : ಮಾಜಿ ಬಿಗ್ ಬಾಸ್ (Bigg Boss) ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತವೊಂದನ್ನು ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

BENGALURU : ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನಟಿ ದಿವ್ಯಾ ಸುರೇಶ್ ವಿರುದ್ಧ ರಸ್ತೆ ಅಪಘಾತ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 4ರಂದು ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಿರಣ್ ಮತ್ತು ಅನಿತಾ ಎಂಬ ದಂಪತಿ ಸ್ಪೆಂಡರ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಬಂದ ದಿವ್ಯಾ ಸುರೇಶ್ ಅವರ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: World Cup 2025: ಮಹಿಳಾ ವಿಶ್ವಕಪ್ನಲ್ಲಿ ಸ್ಮೃತಿ ಮಂಧಾನ 14ನೇ ಶತಕ!
ಘಟನೆಯಲ್ಲಿ ಅನಿತಾ ಅವರ ಕಾಲಿಗೆ ಗಾಯವಾಗಿದ್ದು, ಅಪಘಾತದ ಬಳಿಕ ದಿವ್ಯಾ ಸುರೇಶ್ ಅವರು ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿ ಆಗಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಕಿರಣ್ ಎಂಬವರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
MUST WATCH : ತುಮಕೂರು BJP ಭದ್ರ ಕೋಟೆ – ವಿಪನಾಯಕ R ASHOKA ಹೇಳಿಕೆ | TUMAKURU NEWS |




