Raghu Dixit : ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ.

ಸಂಗೀತ ಲೋಕದ ಹೆಸರಾಂತ ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಇದೀಗ ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ.
ಅವರು ಖ್ಯಾತ ಗಾಯಕಿ ಮತ್ತು ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇತ್ತೀಚೆಗಷ್ಟೇ ಇವರಿಬ್ಬರ ವಿವಾಹದ ಕುರಿತು ಸುದ್ದಿ ಹೊರಬಂದಿದ್ದು, ಆ ಬಗ್ಗೆ ರಘು ದೀಕ್ಷಿತ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಈಗ ಆ ಸುದ್ದಿ ನಿಜವಾಗಿದ್ದು, ಕುಟುಂಬದವರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ವಿವಾಹವಾಗಿದ್ದಾರೆ.

ಸಂಗೀತದ ಮೂಲಕ ಪರಿಚಯವಾದ ಈ ಜೋಡಿ, ಒಟ್ಟಿಗೆ ಕೆಲಸ ಮಾಡುವ ಸಮಯದಲ್ಲಿ ಪರಸ್ಪರ ಪ್ರೀತಿಗೆ ಒಳಗಾದರು. ಕುಟುಂಬದವರ ಒಪ್ಪಿಗೆಯೊಂದಿಗೆ ಅವರು ದಾಂಪತ್ಯ ಜೀವನವನ್ನು ಆರಂಭಿಸಿದ್ದಾರೆ.
ವಿವಾಹ ಸಮಾರಂಭಕ್ಕೆ ಯಮುನಾ ಶ್ರೀನಿಧಿ, ಅಯ್ಯೋ ಶ್ರದ್ಧಾ ಸೇರಿದಂತೆ ಹಲವು ಕಲಾವಿದರು ಹಾಗೂ ಸ್ನೇಹಿತರು ಹಾಜರಾಗಿದ್ದರು.
ಈ ಮದುವೆಯ ಸುಂದರ ಕ್ಷಣಗಳ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕಾಮೆಂಟ್ಗಳ ಮೂಲಕ ಹೊಸ ಜೋಡಿಗೆ ಹಾರೈಕೆಗಳನ್ನು ತಿಳಿಸುತ್ತಿದ್ದಾರೆ.
ಇದನ್ನು ಓದಿ : ದೇವರಾಜು ಅರಸು ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು

ಸಂಗೀತ ಲೋಕದಲ್ಲಿ ವಿಶಿಷ್ಟ ಗುರುತು ಮೂಡಿಸಿರುವ ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳು “ಹೊಸ ಜೀವನಕ್ಕೆ ಶುಭಾಶಯಗಳು” ಎಂದು ಶುಭ ಹಾರೈಕೆಗಳನ್ನು ವ್ಯಕ್ತಪಡಿಸಿದ್ದಾರೆ.
50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರಿಗೆ ಇದು 2ನೇ ಮದುವೆ. ಈ ಮೊದಲು (2005) ಅವರು ಡ್ಯಾನ್ಸರ್ ಮಯೂರಿ ಉಪಾಧ್ಯ ಜೊತೆ ವಿವಾಹ ಆಗಿದ್ದರು. 2019ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದರು. ಬಳಿಕ ಇನ್ನೊಂದು ಮದುವೆ ಬಗ್ಗೆ ರಘು ದೀಕ್ಷಿತ್ ಅವರು ಆಲೋಚನೆ ಮಾಡಿರಲಿಲ್ಲ. ಆದರೆ ವಾರಿಜಶ್ರೀ ಜೊತೆ ಒಡನಾಟ ಬೆಳೆದ ಬಳಿಕ ಮದುವೆ ಬಗ್ಗೆ ನಿರ್ಧರಿಸಿದರು. ವಾರಿಜಶ್ರೀ ಅವರಿಗೆ ಈಗ 34 ವರ್ಷ ವಯಸ್ಸು.

ಇದನ್ನು ನೋಡಿ : ಭಯಾನಕ BUS ACCIDENT ! – 20ಕ್ಕೂ ಹೆಚ್ಚು ಪ್ರಯಾಣಿಕರ ದಾರುಣ ಸಾ*




