Cylinder Blast : ಭೀಕರ ಸಿಲಿಂಡರ್ ಸ್ಫೋಟಕ್ಕೆ ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದ ಕೆ.ಆರ್.ಪುರಂನ ತ್ರಿವೇಣಿ ನಗರದಲ್ಲಿ ಇಂದು ಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಬೃಹತ್ ಕಟ್ಟಡವೇ ನೆಲಸಮಗೊಂಡಿದೆ.
ಸ್ಫೋಟದ ತೀವ್ರತೆ ಭಯಾನಕ
ಸ್ಫೋಟದ ತೀವ್ರತೆ ಅತ್ಯಂತ ಭೀಕರವಾಗಿದ್ದು, ಅದರ ಪರಿಣಾಮವಾಗಿ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾಗೂ ಬಾಗಿಲುಗಳು ಸಹ ಹಾನಿಗೊಳಗಾಗಿವೆ.
ಒಬ್ಬರ ಸಾವಿನ ದೃಢೀಕರಣ, ಮೂವರು ಗಂಭೀರ ಗಾಯಗೊಂಡರು
ಇನ್ನು ಸ್ಫೋಟದ ಸಂದರ್ಭದಲ್ಲಿ ಮನೆಯೊಳಗಿದ್ದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ : ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಳ!

ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ಧಾವನೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ತಂಡಗಳು ಸಹ ಸ್ಥಳದಲ್ಲಿ ತನಿಖೆ ನಡೆಸುತ್ತಿವೆ.
ಸ್ಫೋಟದ ನಿಖರ ಕಾರಣ ತಿಳಿಯಬೇಕಿದೆ
ಇನ್ನು ಈ ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಪ್ರಾಥಮಿಕವಾಗಿ ಇದು ಗ್ಯಾಸ್ ಸಿಲಿಂಡರ್ ಸ್ಫೋಟ ಎಂದು ಶಂಕೆ ವ್ಯಕ್ತವಾಗಿದೆ, ಆದರೆ ತನಿಖೆ ನಂತರ ಮಾತ್ರ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ನೋಡಿ : ಬೆಂಗಳೂರು | ಸಿಲಿಂಡರ್ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು




