KARAWAR WEATHER : ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ (Karnataka) ಕರಾವಳಿ ಹಾಗೂ ಗೋವಾ (Goa) ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.

KARAWAR WEATHER: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಗಾಳಿ–ಮಳೆಯ ಆರ್ಭಟದಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಗೋವಾ ಕರಾವಳಿ ಭಾಗಗಳಲ್ಲಿ ಮಳೆಯಿಂದ ಹಲವು ಅನಾಹುತಗಳು ಸೃಷ್ಟಿಯಾಗಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚು ದಾಖಲೆಯಾಗಿದೆ. ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿ ಕಳೆದ 24 ಗಂಟೆಗಳಲ್ಲಿ 80 ಮಿ.ಮೀ, ಬೇಲಿಕೇರಿಯಲ್ಲಿ 76 ಮಿ.ಮೀ ಮತ್ತು ಕುಮಟಾದಲ್ಲಿ 72.8 ಮಿ.ಮೀ ಮಳೆಯಾಗಿದೆ. ಅಲ್ದೇ ರಾಯಚೂರು, ದಕ್ಷಿಣ ಕನ್ನಡ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗಿದೆ.
ಇದನ್ನೂ ಓದಿ : Bengaluru: ಮಾಜಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಕೇಸ್..!
ಉತ್ತರ ಕನ್ನಡದ ಅಂಕೋಲ, ಕುಮಟಾ ಮತ್ತು ಕಾರವಾರ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚು ಇದ್ದು, ಕಾರವಾರದಲ್ಲಿ ಬೆಳಗಿನ ಮಳೆಯಿಂದ ನಗರದ ರೈಲ್ವೆ ನಿಲ್ದಾಣದ ಮಾರ್ಗದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಾಹನ ಸವಾರರು ಮತ್ತು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ. ಮೀನುಗಾರರಿಗೆ ಸಮುದ್ರ ಪ್ರವೇಶಿಸಲು ಎಚ್ಚರಿಕೆ ನೀಡಲಾಗಿದೆ.
MUST WATCH : FIRE IN MUNCIPAL OFFICE | ವ್ಯಾಪಾರಕ್ಕೆ ಅವಕಾಶ ಕೊಡಲಿಲ್ಲ ಅಂತ ವ್ಯಕ್ತಿ ಪುರಸಭೆಗೆ ಬೆಂಕಿ ಇಟ್ಟೆಬಿಟ್ಟ




