BENGALURU : ನಟಿ ಹಾಗೂ ಬಿಗ್ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದವರು ಗಂಭೀರ ಗಾಯಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯಾ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ಇದಕ್ಕೆ ವಿಡಿಯೋ ಮೂಲಕ ದಿವ್ಯಾ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

BENGALURU : ‘ಬಿಗ್ಬಾಸ್’ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ದೇ ನಟಿ ದಿವ್ಯಾ ಸುರೇಶ್ ತಮ್ಮ ಕಾರಿನಲ್ಲಿ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿತ್ತು.
ಬ್ಯಾಟರಾಯನಪುರದಲ್ಲಿ ದಿವ್ಯಾ ಸುರೇಶ್ ಕಾರನ್ನು ವೇಗವಾಗಿ ಚಾಲನೆ ಮಾಡಿ ಬೈಕ್ಗೆ ಡಿಕ್ಕಿ ಹೊಡೆದು, ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗಿದೆ. ಬೈಕ್ನಲ್ಲಿದ್ದ ಮೂವರೂ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬರಿಗೆ ಕಾಲಿನ ಮಂಡಿಚಿಪ್ಪು ಮುರಿದಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತ ಮಾಡಿ ದಿವ್ಯಾ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು.
ಇದನ್ನೂ ಓದಿ : BENGALURU : ಡಿಕೆ ಶಿವಕುಮಾರ್ ಹಾಗೂ ಕುಮಾರಸ್ವಾಮಿ ನಡುವೆ ತಾರಕ್ಕೇರಿದ ವಾಗ್ಯುದ್ಧ..!
ಈ ಹಿನ್ನೆಲೆ ನಟಿ ದಿವ್ಯಾ ಇದೀಗ ವೀಡಿಯೋ ಮೂಲಕ ತಮ್ಮ ಸ್ಪಷ್ಟನೆ ನೀಡಿದ್ದಾರೆ. ಹೌದು ವಿಡಿಯೋದಲ್ಲಿ “ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ತಪ್ಪು ಯಾರೇ ಮಾಡಿರಲಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ. ಇದನ್ನ ಹೇಳಬೇಕು ಅನಿಸಿತು, ಹೇಳಿದ್ದೀನಿ,” ಎಂದು ತಿಳಿಸಿದ್ದಾರೆ.
MUST WATCH : CAR ತಗೊಂಡ್ರೆ S-24 ULTRA PHONE FREE – YS 11 CAR MAX ನಲ್ಲಿ ದೀಪಾವಳಿ ದಮಾಕ- | USED CARS IN TUMKUR |




