Rain Alert : ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಇದಕ್ಕೆ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದ್ಯಾಕೋ ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಈ ಮಳೆ ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭರ್ಜರಿ ಮಳೆ ಯಾಗುತ್ತಿದೆ.
ಇದಕ್ಕೆ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29 ರವರೆಗೂ ಮಳೆಯಾಗಲಿದ್ದು, ಅಕ್ಟೋಬರ್ 30ರ ನಂತರ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ..?
ಇತ್ತ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆ ಯಾಗಲಿದೆ. ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರಿನಲ್ಲಿಯೂ ಗುಡುಗು ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮಳೆ ಬರುವ ನಿರೀಕ್ಷೆಯಿದೆ.
ಇದನ್ನು ಓದಿ : ರೇಣುಕಾ ಸ್ವಾಮಿ ಕೊಲೆ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

ಭಾರೀ ಮಳೆಯಾಗುವ ಜಿಲ್ಲೆಗಳು
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಲ್ಲಿ ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ನೋಡಿ : ಟ್ರಾನ್ಸ್ ಫಾರ್ಮರ್ ಗೆ ಹಬ್ಬಿವೆ ಗಿಡಗಂಟೆ – ಸಾವಿಗಾಗಿ ಕಾದಿವೆ ವಿದ್ಯುತ್ ಕಂಬಗಳು




