
ಗದಗದ ಹರ್ಲಾಪೂರ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನ ಪ್ಪಿರುವ ದುರ್ಘಟನೆ ನಡೆದಿದೆ. ಗೋವಾ ರಾಜ್ಯದ ಕದಂಬ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರು ಹಾವೇರಿ ಜಿಲ್ಲೆ ಬಂಕಾಪೂರ ತಾಲೂಕಿನ ಹುನಗುಂದ ಗ್ರಾಮದ ನಿವಾಸಿ ಗಳಾಗಿದ್ದು, ಅವರನ್ನು ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ನ ಪೇದೆ ಅರ್ಜುನ್ ನೆಲ್ಲೂರ (32), ಅವರ ಸಂಬಂಧಿ ರವಿ ನೆಲ್ಲೂರ (35), ಮತ್ತು ಕೊಪ್ಪಳ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ನ ಪೇದೆ ಈರಣ್ಣ ಉಪ್ಪಾರ (36) ಎಂದು ಗುರುತಿ ಸಲಾಗಿದೆ.
ಗೋವಾ ರಾಜ್ಯದ ಕದಂಬ ಬಸ್ ಪೋಂಡಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಹೊರಡಿದ್ದ ಬಸ್ ಇದಾಗಿದೆ. ಗಂಗಾವತಿಯಿಂದ ಕೊಪ್ಪಳ, ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರ್. ಕಾರ್ ಚಾಲಕನ ನಿರ್ಲಕ್ಷ್ಯದಿಂದ ರೋಡ್ ಡಿವೈಡರ್ ದಾಟಿಕೊಂಡು ಎದುರು ಬರುವ ಬಸ್ಗೆ ಡಿಕ್ಕಿ ಹೊಡೆದ್ದಾರೆ. ಕಾರ್ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಸ್ ಮುಂದಿನ ಭಾಗ ಹಾಗೂ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ತಕ್ಷಣ ಗದಗದ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗದಗ ಗ್ರಾಮೀ ಣ ಪೊಲೀಸ್ ಠಾಣೆಯಲ್ಲಿ ಈ ಸಂಬಂದ ಪ್ರಕರಣ ದಾಖಲಾಗಿದೆ.




