Accident : ಕಂಟೈನರ್ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಟೈನರ್ ಲಾರಿಯೊಂದು ಕಂದಕಕ್ಕೆ ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಹೇಗೆ ನಡೆದಿದೆ?
ಭಾನುವಾರ (ಇಂದು) ಬೆಳಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕೇಬಲ್ ಡ್ರಿಲ್ಲಿಂಗ್ ಮಿಷನ್ ತುಂಬಿದ್ದ ಕಂಟೈನರ್ ಲಾರಿ ಇಳಿಜಾರಿನ ತಿರುವಿನಲ್ಲಿ ಅತಿವೇಗವಾಗಿ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಿದೆ.
ಇದನ್ನು ಓದಿ : ಮಗನಿಂದಲೇ ತಂದೆಯ ಬರ್ಬರ ಹತ್ಯೆ
Accident : ಸ್ಥಳದಲ್ಲೇ ಇಬ್ಬರ ಸಾವು
ಘಟನೆಯ ವೇಳೆ ಇಬ್ಬರು ಕಾರ್ಮಿಕರು ಕಂಟೈನರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಜಾರ್ಖಂಡ್ ಮೂಲದ ಶ್ರೀಮಾನ್ (25) ಮತ್ತು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ (26) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಕಂಟೈನರ್ ಚಾಲಕನಾಗಿದ್ದು, ಶ್ರೀಮಾನ್ ಕೇಬಲ್ ಡ್ರಿಲ್ಲಿಂಗ್ ಮಿಷನ್ ಆಪರೇಟರ್ ಆಗಿದ್ದರು.

Accident : ಗಾಯಾಳುಗಳ ಸ್ಥಿತಿ
ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ತಕ್ಷಣ ಜಿಗಣಿಯ ವಿಜಯಶ್ರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ರಕ್ಷಣಾ ಕಾರ್ಯಾಚರಣೆ
ಅಪಘಾತದ ನಂತರ ಪೊಲೀಸರು ಎರಡು ಕ್ರೇನ್ಗಳ ನೆರವಿನಿಂದ ಮೃತದೇಹಗಳನ್ನು ಹೊರತೆಗೆದರು. ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್, ಹಾಗೂ ಬೆಂಗಳೂರು ಗ್ರಾಮಾಂತರ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ
ಇನ್ನು ಈ ಸಂಬಂಧ ಆನೇಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ನೋಡಿ : ಕಂದಕಕ್ಕೆ ಉರುಳಿದ ಕಂಟೈನರ್ ಲಾರಿ – ಇಬ್ಬರು ದುರ್ಮರಣ, ನಾಲ್ವರು ಗಂಭೀರ




