NEWDELHI : ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ಚಿಂತನೆ ನಡೆಸಿದೆ.

NEWDELHI: ದೇಶಾದ್ಯಂತ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ (Digital Arrest) ವಂಚನೆ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI)ಗೆ ವಹಿಸುವ ಕುರಿತು ನ್ಯಾಯಾಲಯ ಚಿಂತನೆ ನಡೆಸುತ್ತಿದೆ.
ಸುಪ್ರೀಂ ಕೋರ್ಟ್ ಅಕ್ಟೋಬರ್ 17ರಂದು ಸ್ವಯಂಪ್ರೇರಿತವಾಗಿ ಈ ಪ್ರಕರಣವನ್ನು ದಾಖಲಿಸಿಕೊಂಡಿತ್ತು, ಈ ಕುರಿತು ಇಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, “ನ್ಯಾಯಾಧೀಶರು ಮತ್ತು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಬಳಸಿ ನಡೆಯುತ್ತಿರುವ ವಂಚನೆಗಳ ಬಗ್ಗೆ ಸಮಗ್ರ ತನಿಖೆ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ : Shivamogga: ಕಟ್ಟಡದ ಗೋಡೆ ಕುಸಿದು ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಇನ್ನು ನ್ಯಾಯಾಲಯವು ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದ್ದು, ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾದ ಎಫ್ಐಆರ್ಗಳ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ವಿಚಾರಣೆ ವೇಳೆ ಪೀಠವು ಸಿಬಿಐ ತನಿಖೆಯ ಸಾಧ್ಯತೆಯ ಬಗ್ಗೆ, “ದೇಶಾದ್ಯಂತ ಎಲ್ಲಾ ಪ್ರಕರಣಗಳನ್ನು ನಿಭಾಯಿಸಲು ಸಿಬಿಐ ಬಳಿ ಅಗತ್ಯ ಸಂಪನ್ಮೂಲಗಳಿವೆಯೇ?” ಎಂಬ ಪ್ರಶ್ನೆ ಕೇಳಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಿಬಿಐ ಈಗಾಗಲೇ ಕೆಲವು ಪ್ರಕರಣಗಳನ್ನು ತನಿಖೆಗೊಳಪಡಿಸಿದೆ ಹಾಗೂ ಗೃಹ ಸಚಿವಾಲಯದ ಸೈಬರ್ ಅಪರಾಧ ವಿಭಾಗದ ಸಹಾಯ ಪಡೆಯುತ್ತಿದೆ ಎಂದರು.
ನ್ಯಾಯಾಲಯವು ಪ್ರಸ್ತುತ ಯಾವುದೇ ನೇರ ನಿರ್ದೇಶನ ನೀಡದೆ, ಎಲ್ಲ ರಾಜ್ಯಗಳಿಗೆ ನೋಟಿಸ್ ನೀಡಿದೆ. ಏಕರೂಪದ ತನಿಖೆ ಮತ್ತು ಕ್ರಮ ಕೈಗೊಳ್ಳುವ ಕುರಿತು ಮುಂದಿನ ವಿಚಾರಣೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.
MUST WATCH : KN RAJANNA | ಹಿಂದುಳಿದ ವರ್ಗದವರಿಗೆ ರಿಸರ್ವೇಶನ್ ಇಲ್ಲ- ಕೆ.ಎನ್.ರಾಜಣ್ಣ ಹಿಂಗ್ಯಾಕಂದ್ರು | TUMKUR NEWS |




