Hassan : ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

Hassan : ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನೆನ್ನೆ ಮಧ್ಯಾಹ್ನ ಹಾಡಹಗಲೇ ನಡೆದ ಹತ್ಯೆ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಎಂಬ ಯುವಕನನ್ನು, ಸುರಪುರ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನ ಎಂಬಾತ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಸೀನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಗಿರೀಶ್ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಇಬ್ಬರ ನಡುವೆ ಯುವತಿ ವಿಚಾರಕ್ಕೆ ಸಂಬಂಧಿಸಿದ ವಿವಾದ ಉಂಟಾಗಿದೆ. ಈ ಗಲಾಟೆಯಿಂದ ಕೋಪಗೊಂಡ ಸೀನ, ಇಂದು ಬೆಳಿಗ್ಗೆ ಕಾದು ಕುಳಿತಿದ್ದು, ಸಾರಿಗೆ ಬಸ್ ನಿಲ್ದಾಣದ ಶೌಚಾಲಯದಿಂದ ಹೊರಬರುತ್ತಿದ್ದ ಗಿರೀಶ್ ಮೇಲೆ ಏಕಾಏಕಿ ಮಚ್ಚು ಹಿಡಿದು ದಾಳಿ ನಡೆಸಿದ್ದಾನೆ.
ಇದನ್ನು ನೋಡಿ : ಯುವತಿ ವಿಚಾರಕ್ಕೆ ಗಲಾಟೆ ಶಂಕೆ – ಮಚ್ಚಿನಿಂದ ಕೊಚ್ಚಿ ಯುವಕನ ಹತ್ಯೆ

ಇನ್ನು ದಾಳಿಯಲ್ಲಿ ಗಂಭೀರ ಗಾಯಗೊಂಡ ಗಿರೀಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಿದರೂ, ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದಾನೆ.
ಘಟನೆಯ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸೀನ ಘಟನೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಇದನ್ನು ಓದಿ : ನೇಣುಬಿಗಿದುಕೊಂಡು ಯುವಕ ಸೂಸೈಡ್




