Doddaballapura : ಸ್ಕಿಡ್ ಆಗಿ ಬಿದ್ದ ಇಬ್ಬರು ಯುವಕರ ಮೇಲೆ ವಾಹನ ಹರಿದ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಕೆಲಸಕ್ಕೆ ಎಂದು ಹೊರಟ ಯುವಕರು ಹಿಟ್ ಅಂಡ್ ರನ್ಗೆ ಬಲಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯದ ಬಳಿ ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದೆ.
ಮೃತರನ್ನು ತೂಬಗೆರೆ ಗ್ರಾಮದ ನಂದನ್ (22) ಮತ್ತು ರವಿಕುಮಾರ್ (24) ಎಂದು ಗುರುತಿಸಲಾಗಿದೆ. ಈ ಇಬ್ಬರು ಯುವಕರು ಎಲ್ ಅಂಡ್ ಟಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ
ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಬೈಕ್ನಲ್ಲಿ ತೂಬಗೆರೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದಾಗ, ರಾಮಯ್ಯನಪಾಳ್ಯದಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಅವರನ್ನು ಪಾರು ಮಾಡಲು ಯತ್ನಿಸಿದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು,ಆಗ ಅಪರಿಚಿತ ವಾಹನವು ಬೈಕ್ ಸವಾರರ ತಲೆ ಮೇಲೆ ಹರಿದಿದೆ. ತೀವ್ರ ರಕ್ತ ಸ್ರಾವದಿಂದ ಬೈಕ್ ಸವಾರರು ಸಾವನ್ನಪ್ಪಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದ ನಂತರ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಘಟನೆಯ ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : ಸ್ಕಿಡ್ ಆಗಿ ಬಿದ್ದ ಬೈಕ್ ಸವಾರರ ಮೇಲೆ ಹರಿದ ವಾಹನ: ಇಬ್ಬರು ಯುವಕರ ದುರ್ಮರಣ




