Shreyas Iyer : ಶ್ರೇಯಸ್ ಅಯ್ಯರ್ ಮೂರನೇ ಏಕದಿನ ಪಂದ್ಯದ ನಡುವೆ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಐ ಪಂದ್ಯಕ್ಕೂ ಮುನ್ನ, ಶ್ರೇಯಸ್ ಅಯ್ಯರ್ ಭೀಕರ ಗಾಯದ ನಂತರ ಸ್ಥಿರವಾಗಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ. ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಹಿಡಿಯುವ ವೇಳೆ ಅಯ್ಯರ್ ಪಕ್ಕೆಲುಬಿನ ಗಾಯಕ್ಕೆ ಒಳಪಟ್ಟಿದ್ದರು.
ಇಂದು ನಡೆದ ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್ ಈ ಬಗ್ಗೆ ಮಾಹಿತಿ ನೀಇಡಿದ್ದು, “ಅಯ್ಯರ್ ಇನ್ನೂ ಕೆಲವು ದಿನಗಳವರೆಗೆ ವೈದ್ಯರ ನಿಗಾದಲ್ಲಿ ಉಳಿಯುವ ನಿರೀಕ್ಷೆಯಿದೆ, ಆದರೆ ಪ್ರಸ್ತುತ ಅವರು ಅಪಾಯದಿಂದ ಪಾರಾ ಗಿದ್ದಾರೆ. ಫೋನ್ ಕರೆಗಳ ಮೂಲಕ ಮಾತನಾಡುತ್ತಿದ್ದಾರೆ. ಮೊದಲ ದಿನ, ಅವರು ಗಾಯಗೊಂಡಿರುವುದು ತಿಳಿದಾಗ ನಾನು ಅವರಿಗೆ ಕರೆ ಮಾಡಿದ್ದೆ.
ಇದನ್ನು ಓದಿ : ಡಿಕೆ ಶಿವಕುಮಾರ್ ಕಾಲೆಳೆದ ಆರ್ ಅಶೋಕ್

ಆದರೆ ಅವರ ಬಳಿ ಫೋನ್ ಇಲ್ಲ ಎಂದು ತಿಳಿದು ಫಿಸಿಯೋಗೆ ಸಂಪರ್ಕಿಸಿದ್ದೆ. ಅವರು ಸ್ಥಿರವಾಗಿದ್ದಾರೆ ಎಂದು ಮಾಹಿತಿ ನೀಡಿದರು. ಕಳೆದ ಎರಡು ದಿನಗಳಿಂದ ನಾನು ಅವರೊಂದಿಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಫೋನ್ನಲ್ಲಿ ಉತ್ತರಿ ಸುತ್ತಿದ್ದಾರೆ. ವೈದ್ಯರು ಅವರ ಆರೋಗ್ಯವನ್ನು ಗಮನಿಸುತ್ತಿದ್ದಾರೆ.”
ಅಯ್ಯರ್ ಅಪಾಯದಿಂದ ಪಾರಾಗಿದ್ದಾರೆ ಮತ್ತು ಅವರನ್ನು ಐಸಿಯುನಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಖಾಸಗಿ ಕೋಣೆಗೆ ಸ್ಥಳಾಂತರಿಸಲಾಗಿದೆ ಮತ್ತು ವೈದ್ಯರು ಅವರ ಆರೋಗ್ಯವನ್ನು ಗಮನಿಸುತ್ತಿದ್ದಾರೆ ಎಂದು ಶುಕ್ಲಾ ಖಚಿತಪಡಿಸಿದ್ದಾರೆ.

ಇದನ್ನು ನೋಡಿ : ಶ್ರೇಯಸ್ ಅಯ್ಯರ್ ಬಗ್ಗೆ ಬಿಗ್ ಅಪ್ಡೇಟ್.. ಕ್ಯಾಪ್ಟನ್ ಸೂರ್ಯಕುಮಾರ್ ಏನ್ ಹೇಳಿದರು?




