BENGALURU : ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಧಾರವಾಡ ಹೈಕೋರ್ಟ್ (Dharwad High Court) ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

BENGALURU : ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಂಡಿದೆ.
ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ನಾವು ಕಾನೂನು ಹೋರಾಟ ನಡೆಸುತ್ತೇವೆ. ಈ ತೀರ್ಪು ಸರ್ಕಾರಕ್ಕೆ ಹಿನ್ನಡೆ ಅಲ್ಲ. ಕಾನೂನು ಪ್ರಕ್ರಿಯೆಯ ಪ್ರಕಾರ ಮೇಲ್ಮನವಿ ಸಲ್ಲಿಸುತ್ತೇವೆ,” ಎಂದು ತಿಳಿಸಿದ್ದಾರೆ.
ಈ ಕುರಿತು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕೂಡಾ ಪ್ರತಿಕ್ರಿಯೆ ನೀಡಿದ್ದು, “ಸರ್ಕಾರ ಈ ವಿಚಾರವನ್ನು ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ರೂಪದಲ್ಲಿ ಮಂಡಿಸಲು ತೀರ್ಮಾನಿಸಿದೆ. ಜನಹಿತಕ್ಕಾಗಿ ಹೊರಡಿಸಿದ್ದ ಆದೇಶವನ್ನು ಕಾನೂನಾತ್ಮಕವಾಗಿ ಸಮರ್ಥಿಸಲು ಮುಂದಾಗಿದ್ದೇವೆ,” ಎಂದು ಹೇಳಿದ್ದಾರೆ.
ಇದನ್ನೂ ಓದಿ : Newdelhi: ಡಿಜಿಟಲ್ ಅರೆಸ್ಟ್ ವಂಚನೆ-ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ಸಾಧ್ಯತೆ
ಹೀಗಾಗಿ ಸರ್ಕಾರ ಹಾಗೂ ಹೈಕೋರ್ಟ್ ನಡುವಿನ ಈ ವಿಚಾರ ಈಗ ಮುಂದಿನ ಹಂತಕ್ಕೆ ಹೋಗಿದ್ದು, ತಡೆಯಾಜ್ಞೆ ತೆರವು ಹಾಗೂ ಆದೇಶದ ಭವಿಷ್ಯ ಕುರಿತ ನಿರ್ಧಾರವನ್ನು ದ್ವಿಸದಸ್ಯ ಪೀಠ ಕೈಗೊಳ್ಳಲಿದೆ.
MUST WATCH : ಪ್ರಜಾಶಕ್ತಿ ವರದಿಗೆ ಅಧಿಕಾರಿಗಳು ಅಲರ್ಟ್ ಶುದ್ಧ ಕುಡಿಯುವ ನೀರಿನ ಘಟಕ್ಕೆ ಸಿಕ್ತು ಮುಕ್ತಿ | GUBBI IMPACT STORY|




