Rain Alert : ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆ ಅಬ್ಬರಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Rain Alert : ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆ ಅಬ್ಬರಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (ಅ.29) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಇದನ್ನು ಓದಿ : ಸ್ಪೀಕರ್ ಯುಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ

ಇದೇ ವೇಳೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಹವಾಮಾನ ಇಲಾಖೆ ಮುಂದಿನ ಅಕ್ಟೋಬರ್ 30ರವರೆಗೆ ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 45ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸಲಹೆ ನೀಡಿದೆ.

ಇದನ್ನು ನೋಡಿ : ಇದು ಪ್ರಜಾಶಕ್ತಿ ಟಿವಿಯ ಬಿಗ್ ಇಂಪ್ಯಾಕ್ಟ್ – KSRTC ಬಸ್ ನಿಲ್ದಾಣದಲ್ಲಿ ಎಸ್ಕಲೇಟರ್ಗೆ ಸಿಕ್ತು ಚಾಲನೆ




