Mysuru : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿ ತಾಯಿ ಮಗ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Mysuru : ಸುರಕ್ಷತಾ ಕ್ರಮಗಳ ಕೊರತೆಯಿಂದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದಲ್ಲಿ ನಡೆದ ದಾರುಣ ಘಟನೆ ಇದಕ್ಕೆ ಮತ್ತೊಂದು ಉದಾಹರಣೆಯಾಗಿದೆ.
ವಿದ್ಯುತ್ ತಂತಿ ತಗುಲಿ ತಾಯಿ ಮಗ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ನೀಲಮ್ಮ (39) ಹಾಗೂ ಅವರ ಮಗ ಹರೀಶ್ (19) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ನೀಲಮ್ಮ ಅವರು ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಮೇಲಿಂದ ಹಾದುಹೋಗುತ್ತಿದ್ದ ವಿದ್ಯುತ್ ತಂತಿ ಕೆಳಗೆ ಬಿದ್ದು ಅವರ ದೇಹಕ್ಕೆ ತಗುಲಿದೆ. ತಾಯಿಗೆ ಸಹಾಯ ಮಾಡಲು ಓಡಿಹೋದ ಹರೀಶ್ ಕೂಡ ಕರೆಂಟ್ ಶಾಕ್ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನು ಓದಿ : ರಾಷ್ಟ್ರಪತಿಯನ್ನೂ ಬಿಡದ AI ಡೀಪ್ ಫೇಕ್ ವಿಡಿಯೊ ಪೆಡಂಭೂತ!

ಸ್ಥಳೀಯರ ಪ್ರಕಾರ, ಈ ದುರ್ಘಟನೆಗೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಅವರು ಸಮಯಕ್ಕೆ ಮುನ್ನ ಹಾಳಾದ ತಂತಿಗಳನ್ನು ಬದಲಾಯಿಸದಿದ್ದುದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಚೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆದಿದೆ.
ಇದನ್ನು ನೋಡಿ : ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ




