Suicide : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಮೇಲೆ ಮೇಲಾಧಿಕಾರಿಗಳ ಧರ್ಪ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರ್ತಿವೆ.

Suicide : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಮೇಲೆ ಮೇಲಾಧಿಕಾರಿಗಳ ದರ್ಪ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರ್ತಿವೆ. ಇತ್ತ ಕೆಲವು ಸಿಬ್ಬಂದಿಗಳು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ.
ಇನ್ನು ಇಂತಹದ್ದೆ ಒಂದು ಪ್ರಕರಣ ಇದೀಗ ನೆಲಮಂಗಲದಲ್ಲಿ ಬೆಳಕಿಗೆ ಬಂದಿದ್ದು, ಪಿಡಿಓ ಕಿರುಕುಳಕ್ಕೆ ಪಂಚಾಯಿತಿ ಲೈಬ್ರರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ ಪಿಡಿಓ ಗೀತಾಮಣಿ ವಿರುದ್ದ ಇಂತಹದೊಂದು ಕಿರುಕುಳ ಆರೋಪ ಕೇಳಿಬಂದಿದೆ. ಇನ್ನು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 58 ವರ್ಷದ ರಾಮಚಂದ್ರಯ್ಯ ಎನ್ನಲಾಗಿದೆ. ಕಳೆದ 25 ವರ್ಷದಿಂದ ಕಳಲುಘಟ್ಟ ಗ್ರಾಮಪಂಚಾಯಿತಿಯಲ್ಲಿ ಲೈಬ್ರೆರಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರಂತೆ.
ಇದನ್ನು ಓದಿ : ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ತುಳಿದು ತಾಯಿ- ಮಗ ಸಾವು

ಪಿಡಿಓ ಗೀತಾಮಣಿ ಕಳೆದ ಮೂರು ತಿಂಗಳಿಂದ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದರಂತೆ. ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ರಾಮಚಂದ್ರಯ್ಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇನ್ನು ರಾಮಚಂದ್ರಯ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ ಪಿಡಿಓ ಗೀತಾಮಣಿ ಕಿರುಕುಳ ನೀಡುತ್ತಿದ್ದರು ಅನ್ನೋ ಗಂಭೀರ ಆರೋಪ ಕೇಳಿಬಂದಿದ್ದು, ಮನನೊಂದ ರಾಮಚಂದ್ರಯ್ಯ ಕಳೆದ ಸೋಮವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿಷ ಸೇವಿಸಿ ಒದ್ದಾತ್ತಿದ್ದ ರಾಮಚಂದ್ರಯ್ಯನನ್ನು ಸಂಬಂಧಿಕರು ಟಿ ಬೇಗೂರು ಬಳಿರುವ ಸಿದ್ದಾರ್ಥ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು.
ಅದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರಾಮಚಂದ್ರಯ್ಯ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇನ್ನು ಮರಣೋತ್ತರ ಪರೀಕ್ಷೆಗೆ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಸಂಬಂಧ ಪಿಡಿಓ ಗೀತಾ ವಿರುದ್ಧ FIR ದಾಖಲಾಗಿದೆ.

ಇದನ್ನು ನೋಡಿ : ಅಧಿಕಾರಿಗಳೇ ಎಲ್ಲಿದ್ದೀರಾ ಸ್ವಾಮೀ… ತುಮಕೂರಿನ ಪಾರ್ಕ್ ಗಳು ಗಬ್ಬೆದ್ದಿವೆ




