BRAT Movie : ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ʼಬ್ರ್ಯಾಟ್ʼ ಚಿತ್ರ ಈ ವಾರ ಅಕ್ಟೋಬರ್ 31 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಮಂಜುನಾಥ್ ವಿ. ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ನಟಿಸಿದ್ದಾರೆ.

BRAT MOVIE: ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ‘ಬ್ರ್ಯಾಟ್’ (BRAT) ಚಿತ್ರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ನಂತರ ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಜೋಡಿಯಿಂದ ಮೂಡಿಬಂದಿರುವ ಈ ಚಿತ್ರ ಆರಂಭದಿಂದಲೇ ಗಮನ ಸೆಳೆದಿದೆ. ಕೃಷ್ಣ ಅವರ ವಿಭಿನ್ನ ಲುಕ್ ಮತ್ತು ಚಿತ್ರ ಟೀಸರ್-ಟ್ರೇಲರ್ಗಳಿಗೆ ಬಂದಿರುವ ಜನಪ್ರಿಯತೆ ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ.

ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಮನಿಶಾ ಕಂದಕೂರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜೊತೆಗೆ ಅಚ್ಯುತಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಸೇರಿದಂತೆ ಹಲವಾರು ಪ್ರತಿಭಾವಂತ ಕಲಾವಿದರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ : Bengaluru: ಕಾರಿನ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನ ಜೀವ ಕಸಿದುಕೊಂಡ ದಂಪತಿ!
ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ ಜನಮನ ಗೆದ್ದಿವೆ. ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣ, ಗಿರಿ ಮಹೇಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಮತ್ತಷ್ಟು ಮೆರಗು ನೀಡಿವೆ. ಈ ಅಕ್ಟೋಬರ್ 31ರಂದು ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಬರುತ್ತಿರುವ ‘ಬ್ರ್ಯಾಟ್’, ಈ ವರ್ಷದ ಮತ್ತೊಂದು ಯಶಸ್ವಿ ಚಿತ್ರವಾಗಲಿದೆ ಎಂಬ ನಿರೀಕ್ಷೆ ಮೂಡಿದೆ.
MUST WATCH : PDO ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಸೂಸೈ* – GEETHAMANI ವಿರುದ್ಧ ತ್ಯಾಮಗೊಂಡ್ಲುನಲ್ಲಿ FIR




