TOXIC : ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಕುರಿತ ರೀಶೂಟ್, ವಿಳಂಬದಂತಹ ಸುಳ್ಳು ಸುದ್ದಿಗಳಿಗೆ ತೆರೆ ಬಿದ್ದಿದೆ. ವಿಎಫ್ಎಕ್ಸ್ ಸಂಸ್ಥೆಯ ಉದ್ಯೋಗಿ ಸ್ಪಷ್ಟನೆ ನೀಡಿದ್ದು, ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ

‘ಕೆಜಿಎಫ್ 2’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಯಶ್ ಅವರು ಇದೀಗ ತಮ್ಮ ಮುಂದಿನ ಚಿತ್ರ ‘ಟಾಕ್ಸಿಕ್’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ಗಳಲ್ಲಿ ಅಪಾರ ನಿರೀಕ್ಷೆ ಇದೆ. ಆದರೆ, ಕೆಲವರು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಚಿತ್ರತಂಡದ ವಿರುದ್ಧ ನಕಾರಾತ್ಮಕ ವದಂತಿಗಳನ್ನು ಹರಡುತ್ತಿದ್ದಾರೆ.
‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ
ಸೋಷಿಯಲ್ ಮೀಡಿಯಾದಲ್ಲಿ ಹರಿದ ವದಂತಿಗಳ ಪ್ರಕಾರ, ಚಿತ್ರ ಶೂಟಿಂಗ್ ಪೂರ್ಣಗೊಂಡಿಲ್ಲ, ರೀ-ಶೂಟ್ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಈ ಆರೋಪಗಳಿಗೆ ಸಾಕ್ಷಿ ಸಮೇತ ಸ್ಪಷ್ಟನೆ ಸಿಕ್ಕಿದೆ. ಮೂಲಗಳ ಪ್ರಕಾರ ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ ಮತ್ತು ಚಿತ್ರ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದೆ.
ಗೀತು ಮೋಹನ್ದಾಸ್ ನಿರ್ದೇಶನ
ಈ ಚಿತ್ರವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ಅವರು ನಿರ್ದೇಶಿಸುತ್ತಿದ್ದಾರೆ. ಯಶ್ ಅವರು ಚಿತ್ರದಲ್ಲಿ ನಾಯಕನಾಗಿರುವುದರ ಜೊತೆಗೆ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಗೀತು ಮತ್ತು ಯಶ್ ನಡುವೆ ಯಾವುದೇ ತಕರಾರು ಇಲ್ಲ ಎಂಬುದು ಈಗ ಸ್ಪಷ್ಟವಾಗಿದೆ.
ಇದನ್ನು ಓದಿ : ODI ಅಗ್ರ ಸ್ಥಾನಕ್ಕೇರಿದೆ ರೋಹಿತ್ ಶರ್ಮಾ!

ವಿಎಫ್ಎಕ್ಸ್ ಸಂಸ್ಥೆಯಿಂದ ಅಧಿಕೃತ ಸ್ಪಷ್ಟನೆ
‘ಪಾನಿಪುರಿ’ ಎಂಬ ಟ್ವಿಟರ್ ಖಾತೆಯಿಂದ “ಯಶ್ ಸಿನಿಮಾದ ಫುಟೇಜ್ ಖುಷಿ ನೀಡಿಲ್ಲ, ರೀ-ಶೂಟ್ ನಡೆಯುತ್ತಿದೆ” ಎಂಬ ಸುದ್ದಿ ಹಬ್ಬಿಸಲಾಗಿತ್ತು. ಈ ವದಂತಿಗೆ ಸ್ಪಷ್ಟನೆ ನೀಡಿರುವ ವಿಎಫ್ಎಕ್ಸ್ ಸಂಸ್ಥೆಯ ಉದ್ಯೋಗಿ ಪ್ರಣಿಲ್ ದೇಶ್ಮುಖ ಅವರು, “ನನಗೆ ನಗು ಬರುತ್ತಿದೆ! ನನ್ನ ಸಹೋದ್ಯೋಗಿಗಳು ಈ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಯಾವುದೇ ರೀ-ವರ್ಕ್ ನಡೆಯುತ್ತಿಲ್ಲ,” ಎಂದು ಹೇಳಿದ್ದಾರೆ.
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ 2026ರ ಮಾರ್ಚ್ 19ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಇನ್ನು ಯಶ್ ಜನ್ಮದಿನಕ್ಕೆ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ಬರುವ ಸಾಧ್ಯತೆ ಇದೆ.

ಇದನ್ನು ನೋಡಿ : PDO ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಸೂಸೈ*




