Mandya : ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ನಡೆದಿದೆ.

Mandya : ಹುಣಸೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು, ಶ್ರೀರಂಗಪಟ್ಟಣ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯೊಂದಕ್ಕೆ ಭೀಕರವಾಗಿ ಡಿಕ್ಕಿಯಾದ ಪರಿಣಾಮ, ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.
ಚಾಲಕ ಸಜೀವ ದಹನ
ಇನ್ನು ಕಾರಿನೊಳಗೆ ಸಿಕ್ಕಿಕೊಂಡ ಚಾಲಕ ಚಂದ್ರಶೇಖರ್ (ಹುಣಸೂರು ಮೂಲದ) ಬೆಂಕಿಯಿಂದ ಪಾರಾಗಲಾಗದೆ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ನವೆಂಬರ್ 1ರಿಂದ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್!
ಶವ ಮೈಸೂರಿಗೆ ರವಾನೆ
ಘಟನೆಯ ನಂತರ ಸ್ಥಳೀಯರು ಮತ್ತು ಪೊಲೀಸರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬಳಿಕ ಮೃತ ಚಂದ್ರಶೇಖರ್ ಅವರ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಪ್ರಕರಣ ದಾಖಲಿಸಿದ ಪೊಲೀಸರು
ಇನ್ನು ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : ಟಿಪ್ಪರ್, ಇನ್ನೋವಾ ನಡುವೆ ಡಿಕ್ಕಿ




