Shivamogga : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವಿಗೀಡಾಗಿದ್ದಾರೆ.

Shivamogga : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತರು
ಈ ಅಪಘಾತದಲ್ಲಿ ಅಸಾದುಲ್ಲ (35), ಸಾಧಿಕ್ (31) ಮತ್ತು ಫೈರೋಜ್ (33) ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭ ವಿಸಿದೆ.
ಅಪಘಾತದ ಕಾರಣ
ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದರಿಂದ ನಿಯಂತ್ರಣ ಕಳೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಾಹನ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿದೆ.
ಇದನ್ನು ನೋಡಿ : ಭೀಕರ ಅಪಘಾತ, ಮರಕ್ಕೆ ಗೂಡ್ಸ್ ಡಿಕ್ಕಿಯಾಗಿ ಮೂವರ ದುರ್ಮರಣ
ಚಾಲಕ ಪ್ರಾಣಾಪಾಯದಿಂದ ಪಾರ
ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಪೊಲೀಸ್ ಪರಿಶೀಲನೆ ಮುಂದುವರಿದಿದೆ
ಇನ್ನು ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿ : ಟಿಪ್ಪರ್, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ




