Hassan Accident : ಮಿನಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆಘಾಟ್ನಲ್ಲಿ ಗುರುವಾರ ಸಂಭವಿಸಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆಘಾಟ್ನಲ್ಲಿ ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಗುರುವಾರ (ಇಂದು) ನಡೆದಿದೆ.
ಮದುವೆ ಸಮಾರಂಭಕ್ಕೆ ಹೊರಟ್ಟಿದ್ದ ಬಸ್ ಪಲ್ಟಿ
ಮಡ್ಡಿಕೆರೆ ಮತ್ತು ವನಗೂರು ಗ್ರಾಮಗಳಿಂದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ KA-12-B-2579 ನಂಬರಿನ ಮಿನಿ ಬಸ್ ಬಿಸಿಲೆಘಾಟ್ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ನಾಳೆ ಮದುವೆ ಆಗಬೇಕಿದ್ದ ಯುವತಿ ದಾರುಣ ಸಾವು
ಅಪಘಾತದಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಗಾಯ
ಅಪಘಾತದಲ್ಲಿ ಒಬ್ಬರ ಕಾಲು ತುಂಡಾಗಿದ್ದು, ನಾಲ್ವರಿಗೆ ಗಂಭೀರ ಗಾಯಗಳು ಆಗಿವೆ. ಇದೇ ವೇಳೆ, 20 ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳುಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸುಬ್ರಹ್ಮಣ್ಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಪ್ರಕರಣ ದಾಖಲು
ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಹಾಸನ | ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ : 20ಕ್ಕೂ ಹೆಚ್ಚು ಮಂದಿಗೆ ಗಾಯ




