BENGALURU: ಬೆಂಗಳೂರು ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಅನುಮೋದನೆ ನೀಡಲಾಗಿದೆ.

BENGALURU: ಬೆಂಗಳೂರು ನಗರದ ಅಭಿವೃದ್ಧಿಗಾಗಿ ಸರ್ಕಾರ ದೊಡ್ಡ ಮಟ್ಟದ ಅನುದಾನವನ್ನು ಬಿಡುಗಡೆ ಮಾಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ₹2,296 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.
ಈ ಅನುದಾನವನ್ನುಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ : Bengaluru: ನವೆಂಬರ್ನಲ್ಲಿ ಕಾಂಗ್ರೆಸ್ ‘ಕ್ರಾಂತಿ’ -ಸಿಎಂ ಬಣದಲ್ಲಿ ಚದುರಂಗದ ಹೊಸ ಆಟ ಆರಂಭ..!
ಇನ್ನು ಸಭೆಯಲ್ಲಿಮುಖ್ಯ ಹಾಗೂ ಉಪಮುಖ್ಯ ರಸ್ತೆಗಳಲ್ಲಿ ಡಾಂಬರೀಕರಣ ಕಾಮಗಾರಿಗಳಿಗೆ ₹1,241.57 ಕೋಟಿ ರೂ.ಅಂದಾಜು ಮೊತ್ತದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜೊತೆಗೆ₹1,055 ಕೋಟಿ ರೂ. ಹೆಚ್ಚುವರಿ ಅನುದಾನ ಸೇರಿ ಒಟ್ಟು ₹2,296 ಕೋಟಿ ರೂ.ಬಿಡುಗಡೆ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ.
ಈ ಸಭೆಯಲ್ಲಿನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಾರ್ವಜನಿಕ ಕಾಮಗಾರಿಗಳ ಸಚಿವ ಹೆಚ್.ಸಿ. ಮಹದೇವಪ್ಪ, ನೀರಾವರಿ ಸಚಿವ ಎಂ.ಬಿ. ಪಾಟೀಲ್ಹಾಗೂ ಇತರ ಸಚಿವರು ಉಪಸ್ಥಿತರಿದ್ದರು.
MUST WATCH: ತುಮಕೂರಲ್ಲಿ ಹೆಚ್ಚಾಗುತ್ತಿದೆ ATROCITY CASE – ಅಂಗಡಿ ಮಾಲೀಕನಿಂದ ದಲಿತ ವ್ಯಕ್ತಿಗೆ ಜೀವ ಬೆದರಿಕೆ..?




