MYSURU : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ಸಾವನ್ನಪ್ಪಿದ್ದ ಘಟನೆ ಮಾಸುವ ಬೆನ್ನಲ್ಲೇ ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ ನಡೆಸಿ ಕೊಂದಿರುವ ಘಟನೆ ನಡೆದಿದೆ.

MYSURU: ಮೈಸೂರು ಜಿಲ್ಲೆಯಲ್ಲಿ ಮತ್ತೆ ರೈತನೊಬ್ಬನ ಮೇಲೆ ಹುಲಿ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ನಿಂಗಯ್ಯ (65) ಎಂದು ಗುರುತಿಸಲಾಗಿದೆ.
ಮೃತ ನಿಂಗಯ್ಯ ಅವರು ಕಾಡಂಚಿನ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇನ್ನು ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Cricket : ಹೇಜಲ್ವುಡ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ — ಅಭಿಷೇಕ್ ಶರ್ಮಾ ಕೆಚ್ಚದೆಯ ಹೋರಾಟ!
ಕೆಲವು ದಿನಗಳ ಹಿಂದಷ್ಟೇ ಇದೇ ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ರೈತ ರಾಜಶೇಖರ್ ಹುಲಿ ದಾಳಿಗೆ ಬಲಿಯಾಗಿದ್ದರು. ಇದೀಗ ಆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಗ್ರಾಮಸ್ಥರು ಕೂಡಲೇ ಹುಲಿ ಬೇಟೆಯಾಟಕ್ಕೆ ಕ್ರಮ ಕೈಗೊಂಡು ಹುಲಿಯನ್ನ ಸೆರೆ ಹಿಡಿಯುವಂತೆ ಹಾಗೂ ಸುರಕ್ಷತಾ ವ್ಯವಸ್ಥೆ ಹೆಚ್ಚಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
MUST WATCH: ಶಿರಾ KSRTC BUS ನಿಲ್ದಾಣದಲ್ಲಿ ಖಾಸಗಿ ವಾಹನ ಸವಾರರಿಗೆ ಪೊಲೀಸರಿಂದ ಎಚ್ಚರಿಕೆ | SIRA NEWS |




