K-SET EXAM : ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ.

K-SET EXAM : ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ–ಸೆಟ್ (K-SET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಭಾನುವಾರ (ನವೆಂಬರ್ 2) ರಾಜ್ಯದಾದ್ಯಂತ ನಡೆಸಲಿದೆ. ಪರೀಕ್ಷೆಯು ಪಾರದರ್ಶಕವಾಗಿ ನಡೆಯಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಬಾರಿ ಮೊದಲ ಬಾರಿಗೆ ಮುಖಚಹರೆ ಪತ್ತೆ ತಂತ್ರಜ್ಞಾನ (Face Recognition Technology)ದ ಮೂಲಕ ಅಭ್ಯರ್ಥಿಗಳ ಗುರುತಿನ ಪರಿಶೀಲನೆ ಮಾಡಲಾಗುತ್ತದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 33 ವಿಷಯಗಳಿಗೆ ನಡೆಯುವ ಈ ಪರೀಕ್ಷೆಗೆ 1.36 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಬೆಂಗಳೂರು ಸೇರಿದಂತೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ ಎಲ್ಲ ವಿಷಯಗಳಿಗೂ ಪರೀಕ್ಷೆ ಇರಲಿದೆ. ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆಗಳು ಮಾತ್ರ ನಡೆಯಲಿವೆ. ಪರೀಕ್ಷೆಯಲ್ಲಿ ನೆಗಟಿವ್ ಮೌಲ್ಯಮಾಪನ ಇರದೇ, ಹಿಂದಿನಂತೆಯೇ ವಸ್ತ್ರಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ: MYSURU: ಮೈಸೂರಿನಲ್ಲಿ ಮತ್ತೆ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ..!
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮುಖಚಹರೆ ಪತ್ತೆ ತಪಾಸಣೆ ಹಾಗೂ ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅವ್ಯವಸ್ಥೆ ಅಥವಾ ನಕಲು ನಡೆಯದಂತೆ ನೋಡಿಕೊಳ್ಳಲಾಗುತ್ತಿದೆ ಎಂದು KEA ತಿಳಿಸಿದೆ.
MUST WATCH : ರಾಶಿ ರಾಶಿ ಕಸ ಹಾಗೂ ಕೊಳಚೆ ನೀರಿನಿಂದ ಅಂತರಸನಹಳ್ಳಿ ಸಾರ್ವಜನಿಕರು ಸಂಕಷ್ಟದಲ್ಲಿ | TUMAKURU NEWS




