Bengaluru : ರಾಜ್ಯ ಸರ್ಕಾರದ ರಚನೆ ವೇಳೆ ಪವರ್ ಶೇರಿಂಗ್ ಒಪ್ಪಂದದ ಮಾತುಕತೆ ಆಗಿತ್ತಾ ಎನ್ನುವ ಚರ್ಚೆ ತೀವ್ರವಾಗುತ್ತಿದೆ.

Bengaluru : ರಾಜ್ಯ ಸರ್ಕಾರದ ರಚನೆ ವೇಳೆ ಪವರ್ ಶೇರಿಂಗ್ (Power Sharing) ಒಪ್ಪಂದ ನಡೆದಿತ್ತಾ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಂದುವರೆಯುತ್ತೇನೆ” ಎಂದು ಹೇಳಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕುರಿತ ಚರ್ಚೆಯಾಗುತ್ತಿದೆ.
ನಗುಮುಖದಲ್ಲಿ ಸಿಎಂ ಹಾಗೂ ಡಿಸಿಎಂ ಒಟ್ಟಿಗೆ
ಇಂದು ಕನ್ನಡ ರಾಜ್ಯೋತ್ಸವದ 70ನೇ ವರ್ಷದ ಆಚರಣೆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಗುಮುಖದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.
ಇದನ್ನು ಓದಿ : ಧನುಷ್ಗೆ ಕೊನೆಗೂ ಒಲಿದು ಬಂತು ಕ್ಯಾಪ್ಟನ್ ಪಟ್ಟ

ತಾಯಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ತಾಯಿ ಭುವನೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಅದಕ್ಕೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅವರನ್ನು ಸ್ವಾಗತಿಸಿ ಶುಭಾಶಯ ಕೋರಿದರು.
ಸಿಎಂ ಸಿದ್ದರಾಮಯ್ಯ ಅವರಿಂದಲೂ ಡಿಕೆಶಿಗೆ ಶುಭಾಶಯ ತಿಳಿಸಲಾಯಿತು. ಇಬ್ಬರು ನಾಯಕರು ಪರಸ್ಪರ ಹಸ್ತಲಾಘವ ನೀಡಿ ಆತ್ಮೀಯತೆಯಿಂದ ಕಾಣಿಸಿಕೊಂಡಿದ್ಧಾರೆ.
ಉತ್ತರಾಧಿಕಾರಿ ಯಾರು? ರಾಜಕೀಯ ವಲಯದಲ್ಲಿ ಕುತೂಹಲ
ರಾಜ್ಯದಲ್ಲಿ ಉತ್ತರಾಧಿಕಾರಿ ಯಾರು ಎಂದು ದೊಡ್ಡ ಮಟ್ಟದಲ್ಲೇ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ನಾಯಕರು ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಪವರ್ ಶೇರಿಂಗ್ ಚರ್ಚೆ ನಡುವೆಯೂ ನಗು ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಕಾಣಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಿ.ಎಸ್. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಇದನ್ನು ನೋಡಿ : CM ಸಿದ್ದರಾಮಯ್ಯ- ಡಿಸಿಎಂ ಡಿ.ಕೆ ಶಿವಕುಮಾರ್ ಪರಸ್ಪರ ಮುಖಾಮುಖಿ.. ಮಾತನಾಡಿದ್ರಾ..?




