NEWDELHI: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsava) ಶುಭಾಶಯ ತಿಳಿಸಿದ್ದಾರೆ.

NEWDELHI: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಎಲ್ಲೆಡೆ ಕನ್ನಡದ ಬಾವುಟಗಳು ರಾರಾಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಮೋದಿ ಅವರು ಕನ್ನಡದಲ್ಲೇ ‘ಎಕ್ಸ್ (X)’ ಪೋಸ್ಟ್ ಹಂಚಿಕೊಂಡು, “ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ,” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: VIJAYANAGARA: ಮತ್ತೆ ‘ರಾಮ್ ಜೀ ಗ್ಯಾಂಗ್’ ಆಕ್ಟಿವ್ –ನಿರ್ಮಾಪಕರ ಕಾರು ಗಾಜು ಒಡೆದು ಕಳ್ಳತನ..!
ಇನ್ನು “ಕರ್ನಾಟಕವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುವ ರಾಜ್ಯವಾಗಿದೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ,” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
MUST WATCH: ಚಿ.ನಾ.ಹಳ್ಳಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ – ತಾಲೂಕಿನೆಲ್ಲೆಡೆ ರಾರಾಜಿಸಿದ ಕನ್ನಡ ಬಾವುಟ




