Stampded At Andhra Pradesh : ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ಕಾಲ್ತುಳಿತ ಸಂಭವಿಸಿ 9 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಘಟನೆಯಿಂದ ಆಘಾತ ವ್ಯಕ್ತಪಡಿಸಿ, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪಗಳನ್ನು ತಿಳಿಸಿದ್ದು, ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನು ಓದಿ : ಚಿ.ನಾ.ಹಳ್ಳಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ
ಸ್ಥಳೀಯ ಆಡಳಿತ ಕ್ರಮಗಳು
ಇನ್ನಿ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸಿಎಂ ಸೂಚಿಸಿದ್ದಾರೆ.

ಇದನ್ನು ನೋಡಿ : ಆಂಧ್ರದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ




