RCB : ಕರ್ನಾಟಕದ ಜನತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ತಂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ ತಂಡವು ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯ ತಿಳಿಸಿದೆ. “ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು” ಎಂದು ತಂಡವು ತಮ್ಮ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಆಟಗಾರರು ಹಾರ್ದಿಕ ಶುಭಾಶಯಗಳು ತಿಳಿಸಿದ್ದಾರೆ
RCB ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್, ದೇವದತ್ ಪಡಿಕ್ಕಲ್, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರು ತಮ್ಮ ಪೋಸ್ಟ್ಗಳಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ತಿಳಿಸಿದ್ದಾರೆ.
ಇದನ್ನು ಓದಿ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್

ಅನಿಲ್ ಕುಂಬ್ಳೆ ಹಾರ್ದಿಕ ಶುಭಕೋರಿಕೆ
ಕನ್ನಡಿಗ ಹಾಗೂ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ “ನಮ್ಮ ನಾಡು, ನಮ್ಮ ಸಂಸ್ಕೃತಿ, ನಮ್ಮ ಭಾಷೆ, ನಮ್ಮ ಹೆಮ್ಮೆ — ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದಿನೇಶ್ ಕಾರ್ತಿಕ್ ವಿಶೇಷ ವೀಡಿಯೋ ಪೋಸ್ಟ್
RCB ಕೋಚ್ ದಿನೇಶ್ ಕಾರ್ತಿಕ್ ಕನ್ನಡ ನೆಲ, ಜಲ, ಸಂಸ್ಕೃತಿಯನ್ನು ಬಣ್ಣಿಸಿ ಒಂದು ವಿಶೇಷ ವೀಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೋದಲ್ಲಿ ಅವರು ಕರ್ನಾಟಕದ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

ಇದನ್ನು ನೋಡಿ : ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ: ಕನ್ನಡ ರಾಜ್ಯೋತ್ಸವ ಶುಭಕೋರಿದ ಆರ್ಸಿಬಿ




