Accident : ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

Accident : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡಿದೆ.
ಬಸ್ ಓವರ್ಟೇಕ್ ವೇಳೆ ನಿಯಂತ್ರಣ ತಪ್ಪಿದ ಕಾರು
ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್ಟೇಕ್ ಮಾಡಲು ಯತ್ನಿಸಿದಾಗ ನಿಯಂತ್ರಣ ತಪ್ಪಿ, ಪುತ್ತೂರಿನಿಂದ ತಿಂಗಳಾಡಿ ಕಡೆಗೆ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.
ಶಜ್ವಾ ಫಾತಿಮಾ ಮೃತ ಬಾಲಕಿ
ಈ ಭೀಕರ ಡಿಕ್ಕಿಯಲ್ಲಿ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಎಂಬುವವರು (4½) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಈ ಅಪಘಾತದಿಂದ ಸ್ಥಳೀಯರಲ್ಲಿ ಆತಂಕ ಉಂಟುಮಾಡಿವೆ.
ಇದನ್ನು ಓದಿ : ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ ಮಹಿಳಾ ತಂಡ
ಐವರಿಗೆ ಗಾಯ
ಆಟೋ ಚಾಲಕ ಹನೀಫ್, ಅವರ ಪತ್ನಿ, ಇಬ್ಬರು ಮಕ್ಕಳು ಹಾಗೂ ಅತ್ತೆಗೆ ಗಾಯಗಳಾಗಿದ್ದು, ಇವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.ದೆ̤
ಪೊಲೀಸ್ ತನಿಖೆ ಆರಂಭ
ಇನ್ನು ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ.
ಇದನ್ನು ನೋಡಿ : ಕಾರು-ಆಟೋ ನಡುವೆ ಭೀಕರ ಅಪಘಾತ: ನಾಲ್ಕೂವರೆ ವರ್ಷದ ಕಂದಮ್ಮ ದಾರುಣ ಸಾವು




