SIRA ACCIDENT: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಟಿಟಿ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

SIRA ACCIDENT : ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಅಪಘಾತದಲ್ಲಿ ಗುಜರಾತ್ ಮೂಲದ ಅಮಿತ್ ಪಾಟೀಲ್ (45) ಮತ್ತು ಲತಾ (40) ಎಂಬುವರು ಸಾವನ್ನಪ್ಪಿದರೆ, ಉಳಿದ ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಜರಾತ್ ರಾಜ್ಯದ ಯಾತ್ರಿಕರ ಗುಂಪೊಂದು ತಿರುಪತಿ ದರ್ಶನ ಮುಗಿಸಿಕೊಂಡು ಹಿಂತಿರುಗುವಾಗ ಬೆಂಗಳೂರು–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಟಿಟಿ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟರೆ, ಇನ್ನುಳಿದ ಸುಮಾರು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: Womenʼs World Cup: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ ಮಹಿಳಾ ತಂಡ – ವಿಶ್ವಕಪ್ ಫೈನಲ್ಗೆ ಐತಿಹಾಸಿಕ ಪ್ರವೇಶ!
ಇನ್ನು ವಿಷಯ ತಿಳಿದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕಳ್ಳಂಬೆಳ್ಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
MUST WATCH: ತುಮಕೂರಿಗರಿಗೆ ಸೌಕರ್ಯಗಳೇ ಸಿಗ್ತಿಲ್ಲ ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ | TUMAKURU NEWS |




