Woman Mysterious Death : 25 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ.

25 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಮೃತಳನ್ನು ದಾವಣಗೆರೆ ಜಿಲ್ಲೆಯ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ.
ಮೃತ ಸುಪ್ರಿಯಾ
ಮೃತ ಸುಪ್ರಿಯಾ ಎಂಬವರು ಎಂ.ಬಿ.ಎ ಪದವಿ ಪಡೆದಿದ್ದು, ಬೈಕ್ ರೈಡಿಂಗ್ ತರಬೇತಿಯನ್ನು ಪಡೆಯುತ್ತಿದ್ದವರು ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಅವರು ಸುಬ್ರಹ್ಮಣ್ಯನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.
ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಎರಡು ದಿನಗಳಿಂದ ಅವರ ಕೋಣೆಯ ಬಾಗಿಲು ಲಾಕ್ ಆಗಿದ್ದುದರಿಂದ ಮನೆಯ ಮಾಲೀಕರು ಅನುಮಾನಗೊಂಡಿದ್ದರು. ಇಂದು ಬಾಗಿಲು ತೆರೆಯಲಾಗುವ ವೇಳೆ, ಅವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹವನ್ನು ಕಂಡು ಕಂಗಾಲಾಗಿದ್ದಾರೆ.
ಇದನ್ನು ಓದಿ : ಚೊಚ್ಚಲ ಟ್ರೋಫಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ
ಪೊಲೀಸರಿಂದ ಪರಿಶೀಲನೆ
ಇನ್ನು ಘಟನೆಯು ಬೆಳಕಿಗೆ ಬಂದ ತಕ್ಷಣ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಸಂಭವಿತ ಕಾರಣವೆಂದು ಅನುಮಾನಿಸಲಾಗಿದ್ದು, ಉಚಿತ ಪ್ರಕರಣ (ಯುಡಿಆರ್) ದಾಖಲಿಸಿ ತನಿಖೆ ಪ್ರಾರಂಭಿಸಲಾಗಿದೆ.
ಮೃತದೇಹ ಆಸ್ಪತ್ರೆಗೆ ರವಾನೆ
ಪೋಲಿಸರು ಮನೆಯಲ್ಲಿ ಸಿಕ್ಕ ಸಾಕ್ಷ್ಯಗಳು, ಮೊಬೈಲ್ ಡೇಟಾ ಮತ್ತು ಸುತ್ತಲಿನ ಸಿಸಿಟಿವಿ ಫೂಟೇಜ್ಗಳನ್ನು ಪರಿಶೀಲಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ನೋಡಿ : ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!




