KOLAR: ಕೃಷಿ ಹೊಂಡದಲ್ಲಿ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿ ಸಹ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ, ವಿದ್ಯುತ್ ಸ್ಪರ್ಶದಿಂದ 17 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

KOLAR: ಕೋಲಾರ ತಾಲ್ಲೂಕಿನ ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ತಾಯಿ–ಮಗು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಲಾ (30) ಹಾಗೂ ಚಕ್ರವರ್ತಿ (6) ಎಂದು ಗುರುತಿಸಲಾಗಿದೆ.
ಮಾಲಾ ಎಂಬುವರು ಜಾನುವಾರುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ಮಗ ಚಕ್ರವರ್ತಿ ಹೊಂಡದಲ್ಲಿ ಬಿದ್ದಿದ್ದು, ಅವನನ್ನು ರಕ್ಷಿಸಲು ಹೋಗಿ ತಾಯಿ ಮಗ ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: GUBBI: ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಪಡೆದ ಗುಬ್ಬಿಯ ವಿದ್ಯಾರ್ಥಿನಿ..!
ಇನ್ನೊಂದು ದಾರುಣ ಘಟನೆ ಕೋಲಾರ ತಾಲೂಕಿನ ದೊಡ್ಡವಲ್ಲಭಿ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ದಿಲೀಪ್ (17) ಎಂಬಾತ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾನೆ. ಭಾನುವಾರ ಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ಮೋಟಾರ್ ಆನ್ ಮಾಡಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
MUST WATCH: ಚಿನ್ನ – ಬೆಳ್ಳಿ ಕೆಲಸಗಾರರ ಗೋಳು ಕೇಳೋರಿಲ್ಲ ಸರ್ಕಾರದ ನೆರವು ಕೋರಿದ ಪಿ.ಸುಜ್ಞಾನಮೂರ್ತಿ




