Telangana Accident : ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ತಾಂಡೂರ್ನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ.

Telangana Accident : ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದಿದೆ.
20 ಮಂದಿ ಪ್ರಯಾಣಿಕರು ಸಾವು
ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಆರ್ಟಿಸಿ ಬಸ್ ಮೇಲೆ ಟಿಪ್ಪರ್ನಲ್ಲಿದ್ದ ಜಲ್ಲಿಕಲ್ಲು ಬಿದ್ದ ಪರಿಣಾಮ 20 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರು ಜಲ್ಲಿಕಲ್ಲಿನ ಅಡಿ ಸಿಲುಕಿದ್ದ ಪರಿಣಾಮ ಸ್ಥಳದಲ್ಲೇ 20 ಮಂದಿ ಅಸುನೀಗಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಅಪಘಾತದ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಜೆಸಿಬಿಯಿಂದ ಜಲ್ಲಿಕಲ್ಲಿನಡಿ ಸಿಲುಕಿದವರನ್ನು ರಕ್ಷಿಸಿದರು.
ಇದನ್ನು ಓದಿ : ನಕಲಿ ಮದ್ಯ ಸೇವನೆ – 15 ಮಂದಿ ಅಸ್ವಸ್ಥ

ತಾಂಡೂರ್ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಬಸ್ ಅಪಘಾತ
ಅಪಘಾತಕ್ಕೀಡಾದ ಬಸ್ ತಾಂಡೂರ್ನಿಂದ ಹೈದರಾಬಾದ್ ಕಡೆ ತೆರಳುತಿತ್ತು. ಇದರಲ್ಲಿ 70 ಮಂದಿ ಪ್ರಯಾಣಿಕರಿದ್ದು, ಬಹುತೇಕರು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು. ವಿದ್ಯಾರ್ಥಿಗಳೆಲ್ಲರೂ ಹೈದರಾಬಾದ್ ನ ವಿವಿಧ ಕಾಲೇಜುಗಳಲ್ಲಿ ಓದುತ್ತಿದ್ದವರಾಗಿದ್ದಾರೆ.
ಭಾನುವಾರ ರಜಾ ದಿನವಾಗಿದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಇಂದು ಹೈದರಾಬಾದ್ಗೆ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ರಸ್ತೆ ಅಪಘಾತದಿಂದಾಗಿ ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಚೆವೆಲ್ಲಾ-ವಿಕಾರಾಬಾದ್ ಮಾರ್ಗದಲ್ಲಿ ಹೆಚ್ಚಿನ ವಾಹನಗಳನ್ನು ನಿಲ್ಲಿಸಲಾಗಿತ್ತು

ಇದನ್ನು ನೋಡಿ : ಬಸ್ಗೆ ಜೆಲ್ಲಿ ಲಾರಿ ಡಿಕ್ಕಿ ಹೊಡೆದು 20 ಜನ ಸಾವು




