Mysuru Accident : ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಗರದ ರೈಲ್ವೆ ಮೇಲ್ಸೇತುವೆ ಬಳಿ ಇರುವ ಚಾಮುಂಡಿ ಟೌನ್ಶಿಪ್ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ದ್ವಿಚಕ್ರ ವಾಹನದಲ್ಲಿ ಸವಾರಿಸುತ್ತಿದ ವೇಳೆ ಅಪಘಾತ
ಚಾಮರಾಜನಗರ ತಾಲೂಕಿನ ಉದ್ದನೂರು ಗ್ರಾಮದ ನಿವಾಸಿ ಶಿವಮೂರ್ತಿ (52), ಅವರ ಪತ್ನಿ ಚೆನ್ನಾಜಮ್ಮ (46) ಮತ್ತು ಪುತ್ರ ಸಿದ್ದಾರ್ಥ (15) ಎಂಬ ಕುಟುಂಬದ ಮೂವರು ದ್ವಿಚಕ್ರ ವಾಹನದಲ್ಲಿ ಸವಾರಿಸುತ್ತಿದ ವೇಳೆ KSRTC ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ಇದನ್ನು ಓದಿ : OPERATION ಇಲ್ಲ, INJECTION ಇಲ್ಲ, TABLET ಬೇಡ – ಧೀರ್ಘಕಾಲದ ರೋಗಗಳಿಗೆ FREE TREATMENT
ನಂಜನಗೂಡು ಪ್ರವೇಶದ್ವಾರದಲ್ಲಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ
ಕಾರ್ಯನಿಮಿತ್ತ ಮೈಸೂರಿಗೆ ತೆರಳಿದ್ದ ಈ ಕುಟುಂಬ ವಾಪಸ್ ಊರಿಗೆ ಮರಳುತ್ತಿದ್ದಾಗ, ನಂಜನಗೂಡು ನಗರದ ಪ್ರವೇಶದ್ವಾರದ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ದ್ವಿಚಕ್ರ ವಾಹನವನ್ನು ಹಿಂಬದಿ ದಿಕ್ಕಿನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿದ್ದಾರ್ಥ ಸಾವನ್ನಪ್ಪಿದ್ದಾರೆ.
ಇನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಶಿವಮೂರ್ತಿ ಮೃತಪಟ್ಟಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದ ಚೆನ್ನಾಜಮ್ಮ ಕೂಡ ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : ಬೈಕ್ಗೆ ಹಿಂಬದಿಯಿಂದ ಬಸ್ ಡಿಕ್ಕಿ




