Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ಆರೋಪಿಗಳ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್, ನಟ ದರ್ಶನ್ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.
17 ಆರೋಪಿಗಳ ವಿಚಾರಣೆ ಮುಂದೂಡಿಕೆ
ನವೆಂಬರ್ 3ರಂದು ಜೈಲು ಸೇರಿರುವ ದರ್ಶನ್ ಸೇರಿದಂತೆ 6 ಪ್ರಮುಖ ಆರೋಪಿಗಳು – ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ – ಭಾರಿ ಬಿಗಿ ಭದ್ರತೆಯೊಂದಿಗೆ 57ನೇ ಸೆಷನ್ ಕೋರ್ಟ್ಗೆ ಹಾಜರಾದರು. ಕೋರ್ಟ್ ಖುದ್ದು ಹಾಜರಾಗಲು ಸೂಚಿಸಿತ್ತು. ಇದರಿಂದ ಒಟ್ಟು 17 ಆರೋಪಿಗಳ ವಿಚಾರಣೆಯನ್ನು ಮುಂದೂಡಲಾಗಿದೆ.
ಇದನ್ನು ಓದಿ : ಬೈಕ್ಗೆ ಹಿಂಬದಿಯಿಂದ ಬಸ್ ಡಿಕ್ಕಿ- ದಂಪತಿ, ಮಗ ಸಾವು
ದರ್ಶನ್ ಜೈಲಿನಿಂದ ಹೊರಬಂದ ನಂತರ ನ್ಯಾಯಾಲಯಕ್ಕೆ ಹಾಜರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ, ನಟ ದರ್ಶನ್ ಮತ್ತು ಇತರ ಆರೋಪಿಗಳು ಆಗಸ್ಟ್ 14 ರಂದು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಈ ಬಳಿಕ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದರು. 79 ದಿನಗಳ ಬಳಿಕ ದೋಷಾರೋಪದ ಹಿನ್ನೆಲೆಯಲ್ಲಿ ದರ್ಶನ್ ಜೈಲಿನಿಂದ ಬಿಡುಗಡೆ ಆಗಿ, ನ್ಯಾಯಾಲಯದಲ್ಲಿ ಹಾಜರಾದರು.
ಇದನ್ನು ನೋಡಿ : ನವೆಂಬರ್ 10ಕ್ಕೆ ದರ್ಶನ್ ವಿಚಾರಣೆ ಮುಂದೂಡಿಕೆ




