Supreme Court: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಎಲ್ಲ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ (State Govt) ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ.

Supreme Court: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ ನೀಡಿದೆ.
ಕಾಂಗ್ರೆಸ್ ನಾಯಕ ಎಂ. ಶಿವರಾಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಮೂರ್ತಿ ಸೂರ್ಯಕಾಂತ್, ಉಜ್ಜಲ್ ಭುಯಾನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಪ್ರಕ್ರಿಯೆಯಿಂದಾಗಿ ಅಧಿಸೂಚನೆ ವಿಳಂಬವಾಗಿದೆ ಎಂದು ತಿಳಿಸಿದರು. ಈಗ ಎಲ್ಲಾ ಸಿದ್ಧತೆಗಳಾಗಿದ್ದು, ನವೆಂಬರ್ 15ರೊಳಗೆ ಕ್ಷೇತ್ರ ಪುನರ್ವಿಂಗಡಣೆಯ ಅಂತಿಮ ಅಧಿಸೂಚನೆ ಮತ್ತು ಡಿಸೆಂಬರ್ 15ರೊಳಗೆ ವಾರ್ಡ್ ಮೀಸಲಾತಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕೋರ್ಟ್ಗೆ ಭರವಸೆ ನೀಡಿದರು.
ಇದನ್ನೂ ಓದಿ : POLITICAL NEWS: ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ವಿರೋಧ – ಡಿಸಿಎಂನಿಂದ ತಿರುಗೇಟು!
ಇನ್ನು ರಾಜ್ಯ ಚುನಾವಣಾ ಆಯೋಗದ ಪರ ವಾದಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆದರೆ ಚುನಾವಣೆಯನ್ನು ಪೂರ್ಣಗೊಳಿಸಲು ಇನ್ನೂ 2–3 ತಿಂಗಳು ಅಗತ್ಯವಿದೆ ಎಂದು ತಿಳಿಸಿದರು.
ಅರ್ಜಿದಾರರ ಪರ ವಕೀಲರು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆಕ್ಷೇಪಿಸಿದ ಹಿನ್ನೆಲೆಯಲ್ಲಿ, ಕೋರ್ಟ್ ವಿಚಾರಣೆಯನ್ನು ಮುಂದೂಡಿದ್ದು, ನಿಗದಿತ ಅವಧಿಯೊಳಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
MUST WATCH: ಅರಸೀಕೆರೆಯ ಶ್ರೀ ಪ್ರಸನ್ನ ಗಣಪತಿಯ ಅದ್ದೂರಿ ವಿಸರ್ಜನೋತ್ಸವ ನೋಡಲು ಜನವೋ.. ಜನ |




