
KANTARA CHAPTER 1 TRAILER RELEASE : ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ಇದೀಗ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಆದರೀಗ ಸಿನಿಮಾ ಟ್ರೈಲರ್ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ.
ಇನ್ನು ಚಿತ್ರದ ಬಗ್ಗೆ ಯಾವುದೇ ಸುದ್ದಿಗೋಷ್ಠಿ, ಪ್ರೀ-ರಿಲೀಸ್ ಈವೆಂಟ್ ಅಥವಾ ಹಾಡುಗಳ ಬಿಡುಗಡೆ ಸಾಧ್ಯವಾಗದೇ ಇದ್ದ ಕಾರಣ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಆದರೆ ಇದೀಗ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.
‘ಕಾಂತಾರ ಚಾಪ್ಟರ್ 1’ ಟ್ರೈಲರ್ ಇದೇ ಸೆಪ್ಟೆಂಬರ್ 22ರಂದು ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಈ ಟ್ರೈಲರ್ ಹೊಂಬಾಳೆ ಫಿಲ್ಮ್ಸ್ನ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಲಭ್ಯವಿರಲಿದೆ.





