EARTHQUAKE: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ಮಂಗಳವಾರ ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಸದ್ದಿನೊಂದಿಗೆ ಭೂಮಿ ನಡುಗಿದ ಅನುಭವ ಆಗಿದೆ.

EARTHQUAKE: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಮಂಗಳವಾರ ಬೆಳಿಗ್ಗೆ 7:49ರ ಸುಮಾರಿಗೆ ವಿಜಯಪುರ ನಗರ ಮತ್ತು ಸುತ್ತಮುತ್ತಲಿನ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ, ಹೊನ್ನೂಟಗಿ ಸೇರಿದಂತೆ ಹಲವಾರು ಭಾಗಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದೆ.
ಇನ್ನು ಜನರಿಗೆ ಭಾರೀ ಸದ್ದಿನೊಂದಿಗೆ ಭೂಮಿ ನಡುಗಿದ ಅನುಭವ ಆಗಿದ್ದು, ಕೆಲವರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಸಿಸಿ ಕ್ಯಾಮೆರಾಗಳಲ್ಲಿ ಭೂಕಂಪನದ ತೀವ್ರತೆ ಹಾಗೂ ಜೋರಾದ ಸದ್ದು ಸೆರೆಯಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯಲ್ಲಿ ಭೂಕಂಪನ ದಾಖಲಾಗಿದೆ.
ಇದನ್ನೂ ಓದಿ: RECRUITMENT: ದೆಹಲಿ ಅಭಿವೃದ್ಧಿ ಪ್ರಾಧಿಕಾರದಲ್ಲಿ 1,732 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇನ್ನು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಈಗಾಗಲೇ 13 ಬಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ವಿಜ್ಞಾನಿಗಳ ಪ್ರಕಾರ, ಇವು ಮೈಕ್ರೋ ಟ್ರೆಮರ್ (ಸೂಕ್ಷ್ಮ ಭೂಕಂಪನ)ಗಳಾದರೂ ನಿರಂತರ ಕಂಪನಗಳ ಹಿನ್ನೆಲೆ ಪರಿಶೀಲನೆ ಅಗತ್ಯವಿದೆ ಎಂದು ಹೇಳಿದ್ದಾರೆ. ಸ್ಥಳೀಯ ಆಡಳಿತವು ತುರ್ತು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜನರು ಗಾಬರಿಯಾಗದೆ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದೆ.
MUST WATCH: ಪಾವಗಡ ಪುರಸಭೆಯಲ್ಲಿ ಅಲ್ಲೋಲ ಕಲ್ಲೋಲ ರಸ್ತೆ, ಚರಂಡಿ, ಬಾಡಿಗೆ ವಿಚಾರವಾಗಿ ವಾಗ್ವಾದ




