Accident : ಕಾರು ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ನಲ್ಲಿ ನಡೆದಿದೆ.

Accident : ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನೀಲಂನಳ್ಳಿ ತಾಂಡಾದ ಹತ್ತಿರ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಸ್ಥಳದಲ್ಲಿಯೇ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ತೆಲಂಗಾಣ ಮೂಲದವರು
ಇನ್ನು ಮೃತರಾದ ಮೂವರು ತೆಲಂಗಾಣದ ನಾರಾಯಣಖೇಡ್ ಮೂಲದವರು ಎಂದು ಮಾಹಿತಿ ದೊರಕಿದೆ. ಅವರ ಗುರುತಿನ ದೃಢೀಕರಣಕ್ಕಾಗಿ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.
ಇದನ್ನು ಓದಿ : 37ನೇ ವಸಂತಕ್ಕೆ ಕಾಲಿಟ್ಟ ‘ಕಿಂಗ್’ ಕೊಹ್ಲಿ
ಅಪಘಾತದ ವಿವರ
ಕಾರು ಬೀದರ್ ಕಡೆದಿಂದ ಹುಮನಾಬಾದ್ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಗೂಡ್ಸ್ ವಾಹನ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ. ಇನ್ನು ಕಾರಿನಲ್ಲಿ ಇದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಾಯಾಳುಗಳನ್ನು ತಕ್ಷಣ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ
ಘಟನಾ ಸ್ಥಳಕ್ಕೆ ಧನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣಗಳನ್ನು ಪತ್ತೆಮಾಡಲು ತಪಾಸಣೆ ಮುಂದುವರಿಯುತ್ತಿದೆ.
ಸಾರ್ವಜನಿಕರಿಗೆ ಎಚ್ಚರಿಕೆ
ಸ್ಥಳೀಯ ಅಧಿಕಾರಿಗಳು ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಚಾಲನೆ ಹಾಗೂ ನಿಯಮ ಪಾಲನೆ ಮಾಡಬೇಕೆಂದು ಸೂಚಿಸಿದ್ದಾರೆ.
ಇದನ್ನು ನೋಡಿ : ಕಾರು, ಗೂಡ್ಸ್ ವಾಹನ ಢಿಕ್ಕಿ; ಮೂವರು ಮೃತ್ಯು




