B.Y. Vijayendra Birthday : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ಇಂದು 50ನೇ ಹುಟ್ಟುಹಬ್ಬದ ಸಂಭ್ರಮ.

B.Y. Vijayendra Birthday : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y VIJAYENDRA)ಅವರಿಗೆ ಇಂದು 50ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಜನ್ಮದಿನದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಶ್ರೀಕ್ಷೇತ್ರ ಕಲ್ಲೋಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ವಿಜಯೇಂದ್ರ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
B.Y. Vijayendra Birthday – ಜನ್ಮದಿನದ ವಿಶೇಷ ಪೂಜೆ ಮತ್ತು ದರ್ಶನ
ವಿಜಯೇಂದ್ರ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ ಸಿಗಲಿ ಹಾಗೂ ರೈತ ಸಮುದಾಯಕ್ಕೆ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಲಭಿಸಲಿ ಎಂದು ಪ್ರಾರ್ಥಿಸಿದರು.
ಇದನ್ನು ಓದಿ : ಕಾರು, ಗೂಡ್ಸ್ ವಾಹನ ಡಿಕ್ಕಿ – ನಾಲ್ವರು ಸಾವು

ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಉಪಸ್ಥಿತಿ
ಇನ್ನು ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ರೂಪಾಲಿ ನಾಯ್ಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸುಭಾ ಪಾಟೀಲ್, ಹಾಗೂ ಪಕ್ಷದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನೆ ಮತ್ತು ಸಂದೇಶ
ಬಿ.ವೈ. ವಿಜಯೇಂದ್ರ ತಮ್ಮ ಜನ್ಮದಿನದಂದು ದೇವರ ಆಶೀರ್ವಾದ ಪಡೆಯುವುದರ ಜೊತೆಗೆ ಗ್ರಾಮೀಣ ಕೃಷಿ ಸಮುದಾಯಕ್ಕೆ ಬೆಂಬಲ ನೀಡುವ ಮಹತ್ವದ ಸಂದೇಶವನ್ನು ಹಂಚಿದರು.
ಇದನ್ನು ನೋಡಿ : ಗಂಡ ಮಕ್ಕಳನ್ನು ಬಿಟ್ಟು AUNTY ESCAPE




