K-SET 2025 : ಕೆಸೆಟ್ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಕೆಇಎ ವೆಬ್ಸೈಟ್ನಲ್ಲಿ ನ.6 ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

K-SET 2025 : ನವೆಂಬರ್ 2ರಂದು ರಾಜ್ಯದಾದ್ಯಂತ ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್–2025) ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
ನವೆಂಬರ್ 6ರೊಳಗೆ ಆಕ್ಷೇಪಣೆ ಸಲ್ಲಿಸಬಹುದು
ಇನ್ನು ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ನವೆಂಬರ್ 6ರಂದು ಮಧ್ಯಾಹ್ನ 3 ಗಂಟೆಯೊಳಗೆ ಕೆಇಎ ವೆಬ್ಸೈಟ್ನಲ್ಲಿ ಒದಗಿಸಲಾದ ಆನ್ಲೈನ್ ಪೋರ್ಟಲ್ ಮೂಲಕ ಮಾತ್ರ ಸಲ್ಲಿಸಬಹುದು.
ಕೆಸೆಟ್-2025ರ ಕೀ ಉತ್ತರಗಳಿಗಾಗಿ ಈ ಲಿಂಕ್ https://cetonline.karnataka.gov.in/kea/kset2025 ಕ್ಲಿಕ್ ಮಾಡಿ
ಆಕ್ಷೇಪಣೆ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಪತ್ರಿಕೆಯ ವಿವರ, ವಿಷಯ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಅಪ್ಲೋಡ್ ಮಾಡಬೇಕು.
- ಪ್ರತಿ ಆಕ್ಷೇಪಣೆಗೆ ₹50 ಶುಲ್ಕ ಪಾವತಿಸಬೇಕು.
- ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ ಅಥವಾ ಆಧಾರರಹಿತ ದಾಖಲೆಗಳೊಂದಿಗೆ ಸಲ್ಲಿಸಿದ, ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
- ವಿಷಯ ತಜ್ಞರ ಸಮಿತಿ ಆಕ್ಷೇಪಣೆಗಳ ಪರಿಶೀಲನೆ ನಡೆಸಿ ತೀರ್ಮಾನಿಸಿದ ಕೀ ಉತ್ತರಗಳು ಅಂತಿಮ ಎಂದು ಕೆಇಎ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: K-SET EXAM: ನ. 2ರಂದು ಕೆ-ಸೆಟ್ ಪರೀಕ್ಷೆ- KEA ಕಟ್ಟುನಿಟ್ಟಿನ ಕ್ರಮಗಳು
ಇನ್ನು 11 ಜಿಲ್ಲೆಗಳಲ್ಲಿ 316 ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ಮುಗಿದಿದೆ. ಒಟ್ಟು 1.34 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ 1.21 ಲಕ್ಷ ಮಂದಿ (ಶೇ.90) ಪರೀಕ್ಷೆಗೆ ಹಾಜರಾಗಿದ್ದರು. ಅಲ್ದೇ ಈ ಪರೀಕ್ಷೆ 34 ವಿಷಯಗಳಿಗೆ ನಡೆದಿದ್ದು, ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಡೆಯಿತು.

ಅರ್ಹತಾ ನಿಯಮಗಳು
ಕೆಸೆಟ್ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು ಅಥವಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಳ್ಳಲು ಅರ್ಹರಾಗುತ್ತಾರೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರಬೇಕು. ಎಸ್ಸಿ, ಎಸ್ಟಿ, ಓಬಿಸಿ, ತೃತೀಯ ಲಿಂಗಿ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 50% ಅಂಕ ಅಗತ್ಯ. ಅರ್ಹತೆಗಾಗಿ ಸಾಮಾನ್ಯ ವರ್ಗದವರು ಎರಡೂ ಪತ್ರಿಕೆಗಳಲ್ಲಿ ಕನಿಷ್ಠ 40% ಅಂಕಗಳು, ಉಳಿದ ವರ್ಗದ ಅಭ್ಯರ್ಥಿಗಳು 35% ಒಟ್ಟು ಅಂಕಗಳು ಪಡೆದಿರಬೇಕು.
MUST WATCH: NEET EXAM | ತುಮಕೂರಿನಲ್ಲಿ ನೀಟ್ ಎಕ್ಸಾಂ ಬರೆಯಲು ಜೋಶ್ನಲ್ಲಿ ಬಂದ ಸ್ಟೂಡೆಂಟ್ಸ್




