Modi-Siddaramaiah: ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ.

ರಾಜ್ಯದಲ್ಲಿ ಕಬ್ಬು ಬೆಲೆ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ವತಃ ಹಸ್ತಕ್ಷೇಪ ಮಾಡಿದ್ದಾರೆ. ಪ್ರತೀ ಟನ್ ಕಬ್ಬಿಗೆ ₹3,500 ರೂ. ದರ ನಿಗದಿಗೆ ರೈತರು ಪಟ್ಟು ಹಿಡಿದಿರುವ ಹಿನ್ನೆಲೆ, ಸಿಎಂ ಅವರು ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಪತ್ರ ಬರೆದು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ.

ತೀವ್ರಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಗದಗ, ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಹಲವು ಸಚಿವರು ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಿದ್ದರೂ ಸಮಸ್ಯೆ ಬಗೆಹರಿಯದೇ ಉಳಿದಿದೆ.
ಇದನ್ನು ಓದಿ : ದಿನಭವಿಷ್ಯ 7 ನವೆಂಬರ್ 2025 ಇಂದು 3ನೇ ಕಾರ್ತಿಕ ಶುಕ್ರವಾರ

“ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ತುರ್ತು ಚರ್ಚೆ ಅಗತ್ಯ”
ಇನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ತುರ್ತು ಚರ್ಚೆ ಅಗತ್ಯ. ರೈತರ ಹಿತಕ್ಕಾಗಿ ಕೇಂದ್ರ ಸರ್ಕಾರವೂ ಮುಂದೆ ಬರಬೇಕು” ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರದ ನೆರವಿಗಾಗಿ ಸಿಎಂ ಮನವಿ
ಕಟಾವು ಹಾಗೂ ಸಾರಿಗೆ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ರೈತರಿಗೆ ಸಿಗುವ ನಿಜವಾದ ಲಾಭ ಪ್ರತಿ ಟನ್ಗೆ ₹2,600 ರಿಂದ ₹3,000 ರೂ. ಮಾತ್ರವಿದೆ. ಪ್ರತಿ ಟನ್ಗೆ ₹800 ರಿಂದ ₹900 ರೂ. ವೆಚ್ಚವಾಗುತ್ತಿರುವುದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಆರ್ಥಿಕತೆ ಮತ್ತು ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಿಎಂ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ




