Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರ ಗ್ರಾಚುಟಿ ಸಮಸ್ಯೆಗಳನ್ನು ನೀಗಿಸಲು ಸಿಎಂ ಸಿದ್ದರಾಮಯ್ಯನವರೊಂದಿಗೆ ಚರ್ಚೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Lakshmi Hebbalkar: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ದೀರ್ಘಕಾಲದ ಗ್ರಾಚುಟಿ (Gratuity) ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಗಂಭೀರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
2011-12ರಿಂದ ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೂ ಗ್ರಾಚುಟಿ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಸಂಯುಕ್ತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಪ್ರತಿಭಟನಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿ 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚುಟಿ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಅಚಾತುರ್ಯದಿಂದ ಗ್ರಾಚುಟಿ ತಡ
ಇನ್ನು “ಕೆಲ ಅಧಿಕಾರಿಗಳ ಅಚಾತುರ್ಯದಿಂದಾಗಿ 2011ನೇ ಸಾಲಿನ ಬದಲಾಗಿ 2023ರಿಂದ ಗ್ರಾಚುಟಿ ಜಾರಿಗೆ ಬಂದಿದೆ. ಈ ತಪ್ಪನ್ನು ಸರಿಪಡಿಸಿ, 2011-12ರಿಂದಲೇ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಹಣಕಾಸು ಇಲಾಖೆಯೊಂದಿಗೆ 3–4 ಬಾರಿ ಮಾತುಕತೆ ನಡೆದಿದೆ. ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಮಸ್ಯೆಯನ್ನು ಇತ್ಯರ್ಥಗೊಳಿಸುತ್ತೇವೆ,” ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಭಾಗ್ಯಲಕ್ಷ್ಮಿ ಬಾಂಡ್ ನೀಡಲು ಪಡಿತ್ತಿದ್ದಾರೆ ಲಂಚ? ಮೇಲ್ವಿಚಾರಕಿ, ಕಾರ್ಯಕರ್ತೆಯ ವಿರುದ್ಧ ಆರೋಪ
ಅಂಗನವಾಡಿ ಯೋಜನೆಗೆ 50 ವರ್ಷ – ನವೆಂಬರ್ 19ರಂದು ಬೆಂಗಳೂರಿನಲ್ಲಿ ಅದ್ದೂರಿ ಆಚರಣೆ
ಇನ್ನು ಕರ್ನಾಟಕದಲ್ಲಿ ಅಂಗನವಾಡಿ ಯೋಜನೆ ಆರಂಭವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. “ಈ ಐತಿಹಾಸಿಕ ಸಮಾರಂಭದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
MUST WATCH: ಗ್ರಾಚ್ಯುಟಿಗಾಗಿ ನಿವೃತ್ತ ನೌಕರರ ಪ್ರತಿಭಟನೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರೊಟೆಸ್ಟ್




