Sugar Cane Farmers Protest : ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು.

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಪ್ರತಿ ಕ್ವಿಂಟಾಲ್ಗೆ 3,500 ರೂ. ಬೆಲೆ ನೀಡುವಂತೆ ಒತ್ತಾಯಿಸಿ ಹೆದ್ದಾರಿ ಬಂದ್ಗೆ ಮುಂದಾಗಿದ್ದರು. ಸರ್ಕಾರವು ಈ ಬೇಡಿಕೆಗೆ ತೀವ್ರ ಗಮನ ನೀಡದೇ 3,300 ರೂ. ನೀಡುವುದಾಗಿ ಘೋಷಿಸಿತ್ತು. ಈ ನಿರಾಕರಣೆಯಿಂದ ರೈತರು ಕೋಪಗೊಂಡು ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆಸಿದರು.
ಪೊಲೀಸರ ಮೇಲೆ ಹಲ್ಲೆ
ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಪೊಲೀಸ್ ಸಿಬ್ಬಂದಿಗೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದರು.
ಇದರಿಂದ 100 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದು, 2 ಪೊಲೀಸ್ ವ್ಯಾನ್ಗಳು ಹಾಗೂ ಬಸ್ಗಳಿಗೆ ಸಂಪೂರ್ಣ ಹಾನಿಯಾಗಿದೆ.
ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ
ಹತ್ತರಗಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪಿ ಎಸ್ ಐ ಆರ್ ವಿ ಪಾಟೀಲ್ ಮಾಹಿತಿ ನೀಡಿದ್ದು, ಪ್ರಕರಣದಡಿ ಬಿಎನ್ಎಸ್ ಕಾಯ್ದೆ ಹಾಗೂ ಸಾರ್ವಜನಿಕ ಆಸ್ತಿ ಹಾನಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ : Kudur : ಮಾಲೀಕನಿಂದಲೇ ದಲಿತ ವ್ಯಕ್ತಿಯ ಬರ್ಬರ ಹತ್ಯೆ..?

ಆರೋಪಿಗಳ ಪತ್ತೆಗೆ ವಿಶೇಷ ತಂಡ
ಸಿಸಿಟಿವಿ ಮತ್ತು ಮೊಬೈಲ್ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಮತ್ತು ಶೋಧ ಕಾರ್ಯ ಮುಂದುವರುತ್ತಿದೆ.
ಗೃಹ ಸಚಿವರ ಪ್ರತಿಕ್ರಿಯೆ
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪೊಲೀಸರಿಗೆ ಸಮ್ಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಬಾರದು ಎಂದು ಸೂಚಿಸಲಾಗಿದೆ. . ಪೊಲೀಸರ ಸಹ ಪತ್ರಿಕಾಸಮಾರಂಭದಲ್ಲಿ ಲಾಠಿ ಚಾರ್ಜ್ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರ ರೈತರ ಪರ
ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಕಬ್ಬು ಬೆಳೆಗಾರರ ಪ್ರತಿಭಟನೆಯ ನಂತರ ಪ್ರತಿ ಟನ್ ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಲಾಗಿದೆ. ಇದರೊಂದಿಗೆ ಸಕ್ಕರೆ ಕಾರ್ಖಾನೆಗಳು 50 ರೂ. ಮತ್ತು ರಾಜ್ಯ ಸರ್ಕಾರ 50 ರೂ. ಸಬ್ಸಿಡಿ ನೀಡಲು ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ಅವರು, ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್ ಪಡೆಯಬೇಕೆಂದು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನು ನೋಡಿ : ಮಹಿಳೆಯಿಂದ ಖಾರದ ಪುಡಿ ಎರಚಿ, ಚಿನ್ನಾಭರಣ ದರೋಡೆಗೆ ಯತ್ನ.. ಹಿಗ್ಗಾಮುಗ್ಗ ಥಳಿಸಿದ ಸಿಬ್ಬಂದಿ..!




