Bus Accident : ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ವೇಳೆ ಬಸ್ ಅಪಘಾತ ಸಂಭವಿಸಿದೆ. ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ವೇಳೆ ಬಸ್ ಅಪಘಾತ (Bus Accident ) ಸಂಭವಿಸಿದೆ. ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು, ಕಾವಡಿ ಸಮೀಪದಲ್ಲಿ ಖಾಸಗಿ ಬಸ್ ಪಲ್ಟಿ ಆಗಿರುವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶಾರದಾ ಪೀಠದ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್ ಪಲ್ಟಿ: ಐವರಿಗೆ ಗಂಭೀರ ಗಾಯ
ಇನ್ನು ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇವರಿಗೆ ತಲೆ ಮತ್ತು ಹೊಟ್ಟೆಗೆ ಪ್ರಮುಖ ಗಾಯಗಳಾಗಿವೆ. 11 ವಿದ್ಯಾರ್ಥಿಗಳಿಗೆ ಕೈ, ಕಾಲುಗಳಲ್ಲಿ ಸಣ್ಣ ಗಾಯಗಳು ಆಗಿದ್ದು, ಶೃಂಗೇರಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಬಸ್ ಚಾಲಕನ ಸ್ಥಿತಿ ಸ್ಥಿರವಾಗಿದ್ದು, ಅವರಿಗೆ ಸಣ್ಣ ಗಾಯಗಳಾಗಿವೆ.
ಇದನ್ನು ಓದಿ : Belagavi : ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ – 11 ಮಂದಿ ವಿರುದ್ಧ FIR
ರಕ್ಷಣಾ ಕಾರ್ಯಾಚರಣೆ
ಸ್ಥಳೀಯರು ತಕ್ಷಣ ಬಸ್ ಬಳಿ ಧಾವಿಸಿ ವಿದ್ಯಾರ್ಥಿಗಳನ್ನು ರಕ್ಷಿಸಿದರು. ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದರು.
ಪ್ರಕರಣ ದಾಖಲು
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ರ್ಯಾಶ್ ಡ್ರೈವಿಂಗ್ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ಬಸ್ನ ತಾಂತ್ರಿಕ ಪರಿಶೀಲನೆಯ ಮೂಲಕ ಅಪಘಾತದ ನಿಖರ ಕಾರಣವನ್ನು ತಿಳಿಯಲು ಪರಿಶೀಲಿಸುತ್ತಿದ್ದಾರೆ.
ಇದನ್ನು ನೋಡಿ : ಸಲಿಂಗ ಕಾಮದ ದಾಹಕ್ಕೆ 5 ತಿಂಗಳ ಕಂದಮ್ಮ ಬಲಿ; ಅಡ್ಡಿಯಾಗ್ತಿದೆ ಎಂದು ಹೆತ್ತ ಮಗುವನ್ನೇ ಕೊಂದಳು ಕ್ರೂರಿ ತಾಯಿ




