Newdelhi: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ.

Newdelhi: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವು ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ತಿಳಿಸಿದ್ದಾರೆ.
ರಚನಾತ್ಮಕ ಅಧಿವೇಶನಕ್ಕೆ ಕಿರಣ್ ರಿಜಿಜು ನಿರೀಕ್ಷೆ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸರ್ಕಾರದ ಈ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಈ ಬಗ್ಗೆ ರಿಜಿಜು ಅವರು ಎಕ್ಸ್ (ಹಳೆಯ ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿ, “ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶದ ಮಧ್ಯೆ ಚಳಿಗಾಲದ ಅಧಿವೇಶನದ ಆರಂಭ
ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಈ ಅಧಿವೇಶನದ ರಾಜಕೀಯ ವಾತಾವರಣದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯದಲ್ಲಿ ಅಂದಾಜಿಸಲಾಗಿದೆ.
ಇದನ್ನೂ ಓದಿ: NEWDELHI : ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ
ಮತದಾರರ ಪಟ್ಟಿಯ ಪರಿಷ್ಕರಣೆ ವಿವಾದ
ಭಾರತದ ಚುನಾವಣಾ ಆಯೋಗ (ECI) ಒಂಬತ್ತು ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಪ್ರಾರಂಭಿಸಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಚಾರದಲ್ಲೂ ವಿರೋಧ ಪಕ್ಷಗಳು ಸರ್ಕಾರವನ್ನು ಕಣಕ್ಕಿಳಿಸಲು ಯತ್ನಿಸಬಹುದು ಎಂದು ತಿಳಿದುಬಂದಿದೆ.
MUST WATCH: ಚಳಿಗಾಲದ ಅಧಿವೇಶನ ನಮ್ಮ ನಾಯಕರು ಯಾವುದರ ಬಗ್ಗೆ ಧ್ವನಿ ಎತ್ತಬೇಕು?




