
TUMAKURU NEWS : ತುಮಕೂರಿನಲ್ಲಿ ಅಕ್ಟೋಬರ್ 7ರಂದು ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾ ಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ಜಿಲ್ಲಾಡಳಿತ ವತಿಯಿಂದ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ತೀರ್ಮಾನಿಸಲಾಗಿದ್ದು, ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರ ಜೊತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯ್ತು. ಸಭೆ ಯಲ್ಲಿ ಡಿಸಿ ಶುಭಕಲ್ಯಾಣ್, ಎಸ್ಪಿ ಅಶೋಕ್, ಜಿಲ್ಲಾ ಪಂಚಾಯ್ತಿ ಸಿಇಒ ಜಿ.ಪ್ರಭು ಸೇರಿ ಸಮುದಾಯದ ಮುಖಂಡರು ಭಾಗಿಯಾಗಿದ್ರು.
ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಸಮುದಾಯದವರೊಂದಿಗೆ ನಡೆದ ಪೂರ್ವಭಾಗಿ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಯ್ತು. ತುಮಕೂರಿನಲ್ಲಿ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಿಸಬೇಕೆಂದು ಪ್ಲಾನ್ ಮಾಡಿಕೊಳ್ಳಲಾಗಿದ್ದು, ಸಭೆಯಲ್ಲಿ ವಾಲ್ಮೀಕಿ ಜಯಂತಿಗೆ ಎಲ್ಲಾ ಅಧಿಕಾರಿ ಗಳು ಭಾಗವಹಿಸುವಂತೆ ಸಮುದಾಯದ ಮುಖಂಡರು ಒತ್ತಾಯ ಹಾಕಿದ್ರು, ಮುಖಂಡರ ಒತ್ತಡಕ್ಕೆ ಮಣಿದ ಡಿಸಿ, ಎಲ್ಲಾ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ರು. ಇತ್ತ ಸಭೆ ಆರಂಭದಲ್ಲೇ ವಾಲ್ಮೀಕಿ ಸಮುದಾಯದ ನಾಯಕ ಕೆ. ಎನ್ ರಾಜಣ್ಣ ಅವರ ಭಾವಚಿತ್ರ ವಿಚಾರ ಚರ್ಚೆ ನಡೆದಿದ್ದು, ಜಿಲ್ಲಾಡಳಿತದ ವಿರುದ್ಧ ಸಮುದಾಯದ ಮುಖಂಡರು ಬೇಸರ ವ್ಯಕ್ತಪಡಿಸಿದ್ರು.
ಇನ್ನು ಸಭೆಯಲ್ಲಿ ವಾಲ್ಮೀಕಿ ಜಯಂತಿಯಂದು ನಗರದಲ್ಲಿ ಅದ್ಧೂರಿ ಮೆರವಣಿಗೆ ನಡೆಯಲಿದ್ದು, ಮೆರವಣಿ ಗೆಯಲ್ಲಿ ವಿವಿಧ ಕಲಾತಂಡ ಭಾಗಿಯಾಗಲಿವೆಯಂತೆ. ಅಲ್ದೇ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದನ ನೀಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಅಲ್ದೇ ಸೆಫ್ಟೆಂಬರ್ 26ರಂದು ವಾಲ್ಮೀಕಿ ಜಯಂತಿ ಅಂಗವಾಗಿ ಎರಡನೇ ಪೂರ್ವಭಾವಿ ಸಭೆ ಕರೆಯಲು ಡಿಸಿ ಸೂಚನೆ ನೀಡಿದ್ದಾರೆ,
ಇನ್ನು ವಾಲ್ಮೀಕಿ ಸಮುದಾಯದ ಮುಖಂಡರ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾದ್ಯಮವರಿಗೆ ಕೇವಲ ಚಿತ್ರೀಕರಣ ಮಾಡಲು ಮಾತ್ರ ಅವಕಾಶ ಇದ್ದು, ಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ಚಿತ್ರೀ ಕರಣ ಮಾಡಲು ಜಿಲ್ಲಾಡಳಿತ ಪರ್ಮಿಷನ್ ನಿರಾಕರಿಸಿದ್ದು, ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.




